ನಕಲಿ ನೇಮಕಾತಿ ಪತ್ರ ಹಾವಳಿ: ಸಮಾಜ ಕಲ್ಯಾಣ ಇಲಾಖೆಯಿಂದ ಪೊಲೀಸರಿಗೆ ದೂರು

Job Scams
Published on

ಬೆಂಗಳೂರು: ಸರ್ಕಾರಿ ನೌಕರಿ ನೇಮಕಾತಿಯಲ್ಲಿ ಅಕ್ರಮ ದಂಧೆ ಭಾರೀ ಸದ್ದು ಮಾಡುತ್ತಿದ್ದರೇ ಮತ್ತೊಂದೆಡೆ ಸಮಾಜ ಕಲ್ಯಾಣ ಇಲಾಖೆ ಹೆಸರಿನಲ್ಲಿ ನಕಲಿ ನೇಮಕಾತಿ ಪ್ರಮಾಣ ಪತ್ರ ಕೊಟ್ಟು ಅಮಾಯಕರಿಗೆ ಮೋಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಐಎಎಸ್ ಕೆ.ಎ. ದಯಾನಂದ್, ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಇದರ ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಆಯುಕ್ತರ ಹೆಸರಿನಲ್ಲಿ ನಕಲಿ ನೇಮಕಾತಿ ಪ್ರಮಾಣ ಪತ್ರ ಸೃಷ್ಟಿಸಿ ಸಾರ್ವಜನಿಕರಿಗೆ ಕೊಟ್ಟು ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ದಯಾನಂದ್ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net