ಶಿಕ್ಷಕರ ಹುದ್ದೆಗೆ ಮೊದಲ ದಿನವೇ 5 ಸಾವಿರ ಅರ್ಜಿ ಸಲ್ಲಿಕೆ: ಅರ್ಜಿ ಶುಲ್ಕ ಪಾವತಿಸಿರುವ ಸಂಖ್ಯೆ ಮಾತ್ರ 5!

Education
Published on

ಬೆಂಗಳೂರು: 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಮೊದಲ ದಿನವೇ 5 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಅರ್ಜಿ ಶುಲ್ಕ ಪಾವತಿಸಿರುವ ಸಂಖ್ಯೆ ಮಾತ್ರ ಕೇವಲ 5.!

ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾ.23ರಂದು ತಡರಾತ್ರಿಯಿಂದ ಚಾಲನೆ ಸಿಕ್ಕಿದೆ. ಮೊದಲ ದಿನವೇ 5 ಸಾವಿರ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬಹುತೇಕ ಅಭ್ಯರ್ಥಿಗಳು ತಂತ್ರಾಂಶ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದು, ಅರ್ಜಿ ಶುಲ್ಕ ಪಾವತಿಸುವ ಪ್ರಮಾಣ ತುಂಬಾ ಕಡಿಮೆ ಇದೆ. ಅರ್ಜಿ ಸಲ್ಲಿಕೆಗೆ ಏ.22ರವರೆಗೆ ಅವಕಾಶ ಕಲ್ಪಿಸಿದೆ.

ಇದರ ಜತೆಗೆ ಶಿಕ್ಷಣ ಇಲಾಖೆಯು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು http://www.schooleducation.kar.nic.in/ ಭೇಟಿ ನೀಡಿ, ಪತ್ರಿಕೆ-1,2,3 ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಇದರಿಂದಾಗಿ ಅಭ್ಯರ್ಥಿಗಳು ಪರೀಕ್ಷೆಗೆ ಅಭ್ಯಾಸ ನಡೆಸಲು ಅನುಕೂಲವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net