ತುಮಕೂರು ಜಿಲ್ಲೆಯ ಗುಪ್ತಚರ ವಿಭಾಗದ ಡಿವೈಎಸ್ಪಿ ಶಿವಕುಮಾರ್​ ಹೃದಯಾಘಾತದಿಂದ ನಿಧನ

TMK DySp
Published on

ತುಮಕೂರು: ಜಿಲ್ಲೆಯ ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿವಕುಮಾರ್ ಅವರು ಹೃದಯಾಘಾತದಿಂದ ಮಧ್ಯರಾತ್ರಿ 12 ಗಂಟೆ ಸಮಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ಜಿಲ್ಲೆ ಜಗಳೂರು ಮೂಲದ ನಿವಾಸಿಯಾಗಿರುವ ಶಿವಕುಮಾರ್​ ಕಳೆದ ಒಂದೂವರೆ ವರ್ಷದಿಂದ ತುಮಕೂರು ಜಿಲ್ಲೆಯ ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.‌

ಎಸ್ಪಿ ಕಚೇರಿಯ ಹಿಂಭಾಗದ ಪೊಲೀಸ್ ಕ್ವಾಟ್ರಸ್​ನಲ್ಲಿ ಶಿವಕುಮಾರ್​ ವಾಸವಾಗಿದ್ದರು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದು, ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ಬಂಧು-ಮಿತ್ರರು ಹಾಗೂ ಸಹೋದ್ಯೋಗಿಗಳು ಶಿವಕುಮಾರ್​ ಸಾವಿಗೆ ಕಂಬನಿ ಮಿಡಿಯುತ್ತಿದ್ದಾರೆ.

ಅಂದಹಾಗೆ ಶಿವಕುಮಾರ್​ ಅವರು 1994ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net