ನಿಮಗೆ ದುಡ್ಡು ಬೇಕು, ನಮಗೆ ಜನ ಬೇಕು..ದಯಮಾಡಿ ಜನರನ್ನು ಬದುಕಿಸಿ ಎಂದು ಕೈ ಮುಗಿದ ಇನ್ಸ್​ಪೆಕ್ಟರ್​!

Inspector
Published on

ವಿಜಯನಗರ: ಲಾಕ್​ಡೌನ್​ ಸಂದರ್ಭದಲ್ಲಿ ಅನಗತ್ಯವಾಗಿ ಹೊರ ಬಂದವರನ್ನು ಬಿಡಿಸಲು ಬಂದ ಕುಟುಂಬಸ್ಥರಿಗೆ ಪೊಲೀಸ್​ ಇನ್ಸ್​ಪೆಕ್ಟರ್​ ಕೈ ಮುಗಿದ ಬೇಡಿಕೊಂಡ ಘಟನೆ ಹೊಸಪೇಟೆಯ ಉದ್ಯೋಗ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಸರ್​ ನನ್ನ ತಮ್ಮನನ್ನು ಬಿಟ್ಟುಬಿಡಿ ಎಂದು ವ್ಯಾಪಾರಿಯೊಬ್ಬರು ಕೇಳಿಕೊಂಡು ಬಂದಿದ್ದರು. ಈ ವೇಳೆ ಮಾತನಾಡಿದ ಇನ್ಸ್​ಪೆಕ್ಟರ್​, ದಯಮಾಡಿ ನಿಮಗೆ ಕೈ ಮುಗಿದು ಕೇಳುವೆ ಜನರನ್ನು ಬದುಕಿಸಿ ಎಂದರು.

ನಿಮಗೆ ದುಡ್ಡು ಬೇಕು, ನಮಗೆ ಜನ ಬೇಕು. ನಾವು ಕೂಡ ಹೆಂಡತಿ ಮಕ್ಕಳನ್ನು ಬಿಟ್ಟು ಸಮಾಜಕ್ಕಾಗಿ ಬಂದಿದ್ದೇವೆ. ಜನ ಮತ್ತು ಇಡೀ ಸಮಾಜ ಬದುಕಬೇಕಿದೆ, ದಯಮಾಡಿ ನಿಯಮ ಪಾಲಿಸಿ ಎಂದು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಶ್ರೀನಿವಾಸ್​ ಕೈ ಮುಗಿದರು.

ಕಠಿಣ ಲಾಕ್​​ಡೌನ್ ಹಿನ್ನೆಲೆಯಲ್ಲಿ ಅನಗತ್ಯವಾಗಿ ಹೊರ ಬಂದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರೊನಾ ಕಂಟ್ರೋಲ್​ಗೆ ಹೊಸಪೇಟೆಯಲ್ಲಿ ಎರಡನೇ ದಿನ ಬಿಗಿ ಕ್ರಮ ತೆಗೆದುಕೊಳ್ಳಲಾಗಿದೆ. ಪೊಲೀಸರು ಹೊರಗಡೆ ಕುಳಿತಿದ್ದವರನ್ನು ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net