ಲಂಚ ಪಡೆದು ಜೈಲುಪಾಲಾಗಿದ್ದ ಪಿಎಸ್ಐಗೆ ಅದ್ಧೂರಿ ಮೆರವಣಿಗೆ ಮಾಡಿದವರಿಗೆ ಕಾನೂನು ಕಂಟಕ!

PSI
Published on

ವಿಜಯನಗರ: ಜೈಲಿನಿಂದ ಬಿಡುಗಡೆಯಾಗಿ ಬಂದ ಪಿಎಸ್ಐ ನಾಗಪ್ಪಗೆ ಅದ್ದೂರಿ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಪ್ಪ ಸೇರಿದಂತೆ 13 ಜನರ ವಿರುದ್ಧ ಕೇಸು ದಾಖಲಾಗಿದೆ.

ಕೊಟ್ಟೂರು ಪೊಲೀಸ್ ಠಾಣೆಯಲ್ಲಿ 13 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪಿಎಸ್​ಐ ನಾಗಪ್ಪ, 2.50 ಲಕ್ಷ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ. ಬಳಿಕ ಅಮಾನತಾಗಿ ಜೈಲು ಪಾಲಾಗಿದ್ದ.

ಇದೀಗ ನಾಗಪ್ಪ ಜೈಲಿನಿಂದ ಬಿಡುಗಡೆಯಾಗಿದ್ದು, ಏನೋ ಸಾಧಿಸಿ ಬಂದವರಂತೆ ಅದ್ಧೂರಿ ಸ್ವಾಗತ ಕೋರಿ ಹೇಸಿಗೆ ಕೆಲಸವನ್ನು ಸ್ಥಳೀಯರು ಮಾಡಿದ್ದಾರೆ. ಅಲ್ಲದೆ, ಕರೊನಾ ನಿಯಮಗಳನ್ನು ಗಾಳಿಗೆ ತೂರಿ ಅದ್ಧೂರಿ ಮೆರವಣಿಗೆ ಮಾಡಿದ್ದಾರೆ.

ಇದೀಗ ಕರೊನಾ ನಿಯಮ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಕೂಡ್ಲಿಗಿ ಸಿಪಿಐ ವಸಂತ್ ಅಸೋದೆ ನೀಡಿದ ದೂರಿನ ಆಧಾರದ ಮೇಲೆ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಿಜಯನಗರ ಎಸ್ಪಿ ಡಾ. ಅರುಣ್ ಕೆ. ಮಾಹಿತಿ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net