ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ‌ ಅವಘಡ, ಇಬ್ಬರು ಸಜೀವ ದಹನ

Fire Accident
Published on

ವಿಜಯಪುರ: ತಡರಾತ್ರಿ ಪ್ಲಾಸ್ಟಿಕ್ ಅಂಗಡಿಯಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ‌ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ನಿಡಗುಂದಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಬಸವನ ಬಾಗೇವಾಡಿ ಕ್ರಾಸ್ ಬಳಿ ಘಟನೆ ನಡೆದಿದೆ.

ಮೃತರನ್ನು ರಾಜಸ್ಥಾನ ಮೂಲದ ಅಶೋಕ ದೇಸ್ನೂಯಿ (25), ಲಿಂಬಾರಾಮ ದೇಸ್ನೂಯಿ(35) ಎಂದು ಗುರುತಿಸಲಾಗಿದೆ. ಹೆದ್ದಾರಿ ಪಕ್ಕದಲ್ಲಿದ್ದ ಎರಡು ಪ್ಲಾಸ್ಟಿಕ್ ಅಂಗಡಿಗಳು ಸುಟ್ಟು ಭಸ್ಮವಾಗಿದೆ. ರಾತ್ರಿ ಅಂಗಡಿಯಲ್ಲೇ ಮಲಗಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ತ್ವರಿತವಾಗಿ ಸ್ಥಳಕ್ಕೆ‌ ಆಗಮಿಸಿ ಬೆಂಕಿ‌ ನಂದಿಸಿದ್ದು, ಅದೇ ಸಾಲಿನಲ್ಲಿದ್ದ ಏಳೆಂಟು ಪ್ಲಾಸ್ಟಿಕ್ ಅಂಗಡಿಗಳನ್ನು ರಕ್ಷಣೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ನಿಡಗುಂದಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net