

ಹುಬ್ಬಳ್ಳಿ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ನ್ಯಾಷನಲ್ ಇನ್ನೊವೇಶನ್ ಫೌಂಡೇಷನ್ (ಎನ್ಐಎಫ್) ಆಯೋಜಿಸಿದ್ದ ರಾಷ್ಟ್ರ ಮಟ್ಟದ ಇನ್ಸ್ಪಾಯರ್ ಅವಾರ್ಡ್ ಮಾನಕ ಸ್ಪರ್ಧೆಯಲ್ಲಿ ಹುಬ್ಬಳ್ಳಿ ಕಾನ್ವೆಂಟ್ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಬಿಯಾ ಫಾರೂಕಿ ರಾಷ್ಟ್ರ ಮಟ್ಟದ ಉತ್ತಮ ಮಾದರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ.
ಅ. 11ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸ್ಪರ್ಧೆಯಲ್ಲಿ ಧಾರವಾಡ ಜಿಲ್ಲೆಯಿಂದ ರಾಬಿಯಾ ಜತೆ, ತಾನಿಯಾ ಥಾಮಸ್, ಕ್ರಿಶಾ ಕಲಬುರ್ಗಿ, ಸಂಗೀತಾ ಬಡಿಗೇರ, ಶಿಶಿರ ಜೋಯಿಸ್ ಭಾಗವಹಿಸಿದ್ದರು. ಅ. 9 ಮತ್ತು 10ರಂದು ದೆಹಲಿಯ ಇಂದಿರಾ ಗಾಂಧಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು.
ಕುರಡಿಕೇರಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ರಾಜಶ್ರೀ ಬೀಡಿ ಧಾರವಾಡ ಜಿಲ್ಲಾ ತಂಡದ ಉಸ್ತುವಾರಿಯಾಗಿದ್ದರು.