ರಕ್ಷಾ ಬಂಧನ ನಿಮಿತ್ಯ ರಾಖಿ ತಯಾರಿಕಾ ಸ್ಪರ್ಧೆ.

15489b38d710438a9703c99f1a8f9402
Published on

ಗದಗ: ಭಾರತೀಯ ಸಂಪ್ರದಾಯಿಕ ಹಬ್ಬಗಳಲ್ಲೊಂದಾದ ರಕ್ಷಾ ಬಂಧನದ ನಿಮಿತ್ಯ ಬಿ. ಇಡಿ. ಪ್ರಶಿಕ್ಷಣಾರ್ಥಿಗಳಿಗೆ ರಾಖಿ ತಯಾರಿಕಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿದ್ಯಾದಾನ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ ಹುಯಿಲಗೋಳ ರವರು ಮಾತನಾಡಿ ಅಣ್ಣ- ತಂಗಿಯರ ಪವಿತ್ರ ಸಂಬಂಧವನ್ನು ಗಟ್ಟಿಗೊಳಿಸುವಲ್ಲಿ ಈ ರಾಖಿ ಹಬ್ಬವು ಮಹತ್ವದ್ದಾಗಿದೆ ಎಂದು ತಿಳಿಸಿದರು. ಅಲ್ಲದೆ, ಮೌಲ್ಯಗಳು ಕಣ್ಮರೆಯಾಗುತ್ತಿರುವ ಇಂದಿನ ದಿನಗಳಲ್ಲಿ ಈ ಹಬ್ಬದ ಆಚರಣೆ ಅರ್ಥಪೂರ್ಣವಾಗಿದೆ. ಇದೇ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳು ತಯಾರಿಸಿದ ವಿವಿಧ ನಮೂನೆಯ ರಾಖಿ ಪ್ರದರ್ಶನವನ್ನು ವೀಕ್ಷಿಸಿ ಪ್ರಥಮ ಸ್ಥಾನ ಪಡೆದವರಿಗೆ ಶುಭಕೋರಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಾಚಾರ್ಯರಾದ ಡಾ. ಗಂಗೂಬಾಯಿ ಪವಾರ ರವರು  ಪ್ರಶಿಕ್ಷಣಾರ್ಥಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಇಂದು ಪ್ರತಿಯೊಬ್ಬರು  ಸ್ಪರ್ಧಾತ್ಮಕ ಮನೋಭಾವದೊಂದಿಗೆ ಒಂದು ವಿಶೇಷ ಕೌಶಲವನ್ನು ಹೊಂದಿದಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಹೊಂದಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಮಸ್ತ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.

 ಕು. ಅಶ್ವಿನಿ ಪ್ರಾರ್ಥನಾ ಗೀತೆ ಹಾಡಿದರು, ಕು. ಸೌಮ್ಯ ಜೋಶಿ ನಿರೂಪಿಸಿದರು, ಉಪನ್ಯಾಸಕರಾದ ಶ್ರೀವಿ.ಪಿ.ಪಾಟೀಲ ಎಲ್ಲರಿಗೂ ಸ್ವಾಗತಿಸಿದರು, ಕೊನೆಗೆ ಶ್ರೀ ಎನ್. ಜಿ. ಚನ್ನಪ್ಪಗೌಡರ  ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net