ಕೋಟತಟ್ಟಿನಲ್ಲಿ ರೇಬಿಸ್ ಲಸಿಕೆ ಕಾರ್ಯಕ್ರಮ

lasike
ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮಕ್ಕೆ ಸತೀಶ್ ಕುಂದರ್ ಚಾಲನೆ ನೀಡಿದರು. ಅನಿಲ್ ಕುಮಾರ್, ಸರಸ್ವತಿ ಮೊದಲಾದವರಿದ್ದರು.
Published on

ಕೋಟ: ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಪಶು ಆಸ್ಪತ್ರೆ ಆಶ್ರಯದಲ್ಲಿ ಗುರುವಾರ ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಸಾಕು ನಾಯಿಗಳಿಗೆ ರೇಬಿಸ್ ಲಸಿಕಾ ಕಾರ್ಯಕ್ರಮ ನಡೆಯಿತು. ಕೋಟ ಪಶು ಆಸ್ಪತ್ರೆಯ ಡಾ.ಅನಿಲ್ ಕುಮಾರ್ ರೇಬಿಸ್ ಲಕ್ಷಣ, ತಡೆಗಟ್ಟುವಿಕೆ ಕುರಿತು ಮಾಹಿತಿ ನೀಡಿದರು. ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ಅವರು ಮಾತನಾಡಿದರು. ಪಾಧ್ಯಕ್ಷೆ ಸರಸ್ವತಿ ಮತ್ತು ಸದಸ್ಯರು, ಕಾರ್ಯದರ್ಶಿ ಸುಮತಿ ಅಂಚನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net