

ಶಿರಸಿ: ನಗರದಲ್ಲಿ ಅತಿ ವೇಗ ಮತ್ತು ನಿರ್ಲಕ್ಷ್ಯನದಿಂದ ವಾಹನ ಚಲಾಯಿಸುವ ಸವಾರರನ್ನು ನಿಯಂತ್ರಿಸಲು ಪೊಲೀಸರು ಭಾನುವಾರದಿಂದ ರಾಡಾರ್ ಗನ್ ಕಾರ್ಯಾಚರಣೆ ಆರಂಭಿಸಿದ್ದಾರೆ.
ನಗರ ಠಾಣಾ ಪಿಎಸ್ಐ ನಾಗಪ್ಪ ಬಿ. ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಭಾನುವಾರ ಬನವಾಸಿ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ ಅತಿವೇಗವಾಗಿ ವಾಹನ ಚಲಾಯಿಸುತ್ತಿದ್ದ ಮೂವರು ಸವಾರರ ಮೇಲೆ ಭಾರತೀಯ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ 3 ಸಾವಿರ ರೂ. ದಂಡ ವಿಧಿಸಿದ್ದಾರೆ.
ಶಿರಸಿ ನಗರ ವ್ಯಾಪ್ತಿಯಲ್ಲಿ ವಾಹನಗಳ ವೇಗದ ಮಿತಿ ಗಂಟೆಗೆ 40 ಕಿ.ಮೀ. ಹಾಗೂ ಮಾರುಕಟ್ಟೆ ಪ್ರದೇಶ ವ್ಯಾಪ್ತಿಯಲ್ಲಿ ಗಂಟೆಗೆ 35 ಕಿ.ಮೀ. ಗರಿಷ್ಠ ವೇಗ ನಿಗದಿಪಡಿಸಲಾಗಿದೆ. ಅತಿ ವೇಗ ಮತ್ತು ನಿರ್ಲಕ್ಷ್ಯಂದ ವಾಹನ ಚಲಾಯಿಸುವ ಸವಾರರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಶಿರಸಿ ಉಪ ವಿಭಾಗದ ಡಿಎಸ್ಪಿ ಗಣೇಶ ಕೆ.ಎಲ್. ಎಚ್ಚರಿಕೆ ನೀಡಿದ್ದಾರೆ.