ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಿ

RAGHAVENDRA HITNAl KOPPAL MLA CM MUDA ISSUE
RAGHAVENDRA HITNAl
Published on

ಕೊಪ್ಪಳ: ತಾಲೂಕಿನ ಗ್ರಾಮೀಣ ರಸ್ತೆಗಳು ಹಾಳಾಗಿದ್ದು, ಅನುದಾನ ನೀಡುವಂತೆ ಶಾಸಕ ರಾವೇಂದ್ರ ಹಿಟ್ನಾಳ ಬುಧವಾರ ಸದನದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.

ಸತತ ಮಳೆಯಿಂದ ರಸ್ತೆಗಳು ಹಾಳಾಗಿವೆ. ಸಂಚಾರಕ್ಕೆ ತೊಂದರೆ ಆಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಪ್ರಗತಿಪಥ ಯೋಜನೆ ಜಾರಿ ಮಾಡಿದ್ದು, ಅದರಡಿ ಅನುದಾನ ನೀಡಿದಲ್ಲಿ ಅನುಕೂಲವಾಗಲಿದೆ ಎಂದು ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಪ್ರಿಯಾಂಕ ರ್ಖಗೆ, ನಿಮ್ಮ ಮನವಿ ಸ್ವೀಕರಿಸಲಾಗುವುದು. ನಮ್ಮ ಸರ್ಕಾರ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪ್ರಗತಿಪಥ ಯೋಜನೆ ಜಾರಿ ಮಾಡಿದೆ. ಕಳೆದ ಕ್ಯಾಬಿನೆಟ್​ನಲ್ಲಿ ಅನುಮೋದನೆ ದೊರೆತಿದೆ. ಶ್ರೀವೇ ಕಾರ್ಯರೂಪಕ್ಕೆ ತರಲಾಗುವುದು. ಪ್ರತಿ ಕ್ಷೇತ್ರಕ್ಕೆ 25-30 ಕಿ.ಮೀ. ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಲಾಗುವುದು. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net