ವಿಧಾನಸಭೆ ಭರವಸೆಗಳ ಸಮಿತಿ ಅಧ್ಯಕ್ಷರಾಗಿ ರಘುಪತಿ ಭಟ್

ragupathi bhat
Published on

ಉಡುಪಿ: ವಿಧಾನಸಭೆ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರನ್ನಾಗಿ ಉಡುಪಿ ಶಾಸಕ ರಘುಪತಿ ಭಟ್ ಅವರನ್ನು ನೇಮಿಸಿ, ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.

ಸಮಿತಿಯ ಸದಸ್ಯರಾಗಿ ಶಾಸಕರಾದ ಎಂ.ಬಿ ಪಾಟೀಲ್, ದತ್ತಾತ್ರೇಯ ಸಿ. ಪಾಟೀಲ್ ರೇವೂರು, ಎಸ್.ಎನ್. ನಾರಾಯಣ ಸ್ವಾಮಿ ಕೆ.ಎಂ., ಸೋಮನಗೌಡ ಬಿ. ಪಾಟೀಲ್ ಸಾಸನೂರು, ಪ್ರಿಯಾಂಕ ಖರ್ಗೆ, ಹರೀಶ್ ಪೂಂಜ, ಎಸ್.ಎನ್. ಸುಬ್ಬಾರೆಡ್ಡಿ, ಸಂಜೀವ ಮಠಂದೂರು, ಎಸ್.ರಾಮಪ್ಪ, ಉದಯ ಬಿ. ಗರುಡಾಚಾರ್, ಡಾ. ಕೆ.ಶ್ರೀನಿವಾಸಮೂರ್ತಿ, ವೆಂಕಟರಡ್ಡಿ ಮುದ್ನಾಳ್ ಮತ್ತು ರವೀಂದ್ರ ಶ್ರೀಕಂಠಯ್ಯ ಅವರನ್ನು ನೇಮಕ ಮಾಡಲಾಗಿದೆ.

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರು ನೀಡಿರುವ ಭರವಸೆಗಳನ್ನು ಕಾರ್ಯಗತಗೊಳಿಸುವಲ್ಲಿ ಸರ್ಕಾರಿ ಭರವಸೆಗಳ ಸಮಿತಿ ಮುಖ್ಯಪಾತ್ರ ವಹಿಸುತ್ತದೆ. ಪ್ರತಿ ವಾರ ವಿಧಾನಸೌಧದಲ್ಲಿ ಪ್ರಗತಿಪರಿಶೀಲನಾ ಸಭೆ ನಡೆಸಲಾಗುವುದು ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net