ರ‌್ಯಾಗಿಂಗ್ ಪ್ರಶ್ನಿಸಿದ ಪ್ರಾಂಶುಪಾಲರಿಗೇ ಹಲ್ಲೆ, ನಾಲ್ವರು ವಿದ್ಯಾರ್ಥಿಗಳ ಬಂಧನ

CRIME LOGO
Published on

ಮಂಗಳೂರು: ನಗರ ಕಮಿಷನರೆಟ್ ವ್ಯಾಪ್ತಿಯಲ್ಲಿ ಎರಡು ತಿಂಗಳ ಅವಧಿಯಲ್ಲಿ ಮೂರನೇ ರ‌್ಯಾಗಿಂಗ್ ಪ್ರಕರಣ ವರದಿಯಾಗಿದೆ. ಸುರತ್ಕಲ್ ಬಳಿಯ ಖಾಸಗಿ ಕಾಲೇಜೊಂದರಲ್ಲಿ ಮತ್ತೆ ರ‌್ಯಾಗಿಂಗ್ ನಡೆದಿದ್ದು, ಇದನ್ನು ಪ್ರಶ್ನಿಸಿದ ಪ್ರಾಂಶುಪಾಲರ ಮೇಲೆಯೇ ಹಲ್ಲೆ ನಡೆದಿದೆ. ಈ ಸಂಬಂಧ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇಂಜಿನಿಯರಿಂಗ್ ಮೂರನೇ ವರ್ಷದ ವಿದ್ಯಾರ್ಥಿಗಳಾದ ಮಹಮ್ಮದ್ ಬಾಝೀಲ್, ಸಂಬ್ರಮ್ ಆಳ್ವಾ, ಕೆ.ಯು. ಸಮೀಲ್, ಅಶ್ವಿನ್ ಎಸ್.ಜಾನ್ಸನ್ ಬಂಧಿತರು.

ಹಿರಿಯ ವಿದ್ಯಾರ್ಥಿಗಳು ರ‌್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು. ಈ ಬಗ್ಗೆ ಪ್ರಾಂಶುಪಾಲರು ನಾಲ್ವರು ವಿದ್ಯಾರ್ಥಿಗಳನ್ನು ಕರೆಸಿ ಬುದ್ದಿ ಮಾತು ಹೇಳಿದ್ದರು. ಕಾಲೇಜಿನಿಂದ ಡಿಬಾರ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಈ ಸಂದರ್ಭ ಪ್ರಾಂಶುಪಾಲರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಸುರತ್ಕಲ್ ಠಾಣೆಯಲ್ಲಿ ಪ್ರಾಂಶುಪಾಲರ ಮೇಲೆ ಹಲ್ಲೆ ಹಾಗೂ ರ‌್ಯಾಗಿಂಗ್ ಪ್ರಕರಣ ದಾಖಲಾಗಿದೆ. ಆರೋಪಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕಾಲೇಜುಗಳಲ್ಲಿ ರ‌್ಯಾಗಿಂಗ್ ಪ್ರಕರಣ ಹೆಚ್ಚುತ್ತಿರುವುದು ಹೊರ ಜಿಲ್ಲೆ, ರಾಜ್ಯದ ಪಾಲಕರು ಆತಂಕ ಪಡುವಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net