ನಾಡದೇವತೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ರಾಹುಲ್ ದ್ರಾವಿಡ್ ದಂಪತಿ

14
Published on

ಮೈಸೂರು: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಪತ್ನಿ ಡಾ.ವಿಜೇತಾ ಜೊತೆ ಭಾನುವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು.

ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಭಾನುವಾರ ಮುಕ್ತಾಯಗೊಂಡ 19 ವರ್ಷದೊಳಗಿನವರ ಕೂಚ್ ಬಿಹಾರ್ ಟ್ರೋಫಿ ಕ್ರಿಕೆಟ್ ಪಂದ್ಯವು ಉತ್ತರಾಖಂಡದ ವಿರುದ್ಧ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಪುತ್ರ ಸುಮಿತ್ ಪರ ಆಡಿದ್ದರು. ಈ ನಿಟ್ಟಿನಲ್ಲಿ ಮಗ ಆಟ ಕಣ್ತುಂಬಿಕೊಳ್ಳಲು ರಾಹುಲ್ ದ್ರಾವಿಡ್ ಮೈಸೂರಿಗೆ ಆಗಮಿಸಿದ್ದು, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.

ದರ್ಶನ ಪಡೆದ ನಟ ರಾಮಚರಣ್: ತೆಲುಗು ನಟ ರಾಮ್‌ಚರಣ್ ತೇಜ ಕೂಡ ಭಾನುವಾರ ಚಾಮುಂಡಿಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ರಾಮ್‌ಚರಣ್ ತೇಜ ಅವರು ತಮ್ಮ ಬಹು ನಿರೀಕ್ಷಿತ ಚಿತ್ರ ಗೇಮ್ ಚೇಂಜರ್ ಸಿನಿಮಾ ಶೂಟಿಂಗಾಗಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net