ರಾಹುಲ್ ಗಾಂಧಿಗೆ ರಾಯಬರೇಲಿಯಲ್ಲಿ ಸೋಲು ಖಚಿತ

ex cm B.S.Yediyurappa
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Published on

ಶಿವಮೊಗ್ಗ: ಎಐಸಿಸಿ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದು ಅಲ್ಲಿಯೂ ಸೋಲು ಖಚಿತ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಈ ಮೊದಲು ಅಮೇಥಿಯಲ್ಲಿ ಸೋತು ಕೇರಳದ ವಯಾನಾಡಿಗೆ ಹೋಗಿದ್ದ ರಾಹುಲ್ ಗಾಂಧಿ ಈ ಬಾರಿ ಅಲ್ಲಿಯೂ ಸೋಲುವ ಭೀತಿಯಿಂದ ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರಕ್ಕೆ ವಲಸೆ ಹೋಗಿದ್ದಾರೆ. ಇವತ್ತೇ ಹೇಳುತ್ತೇನೆ, ರಾಹುಲ್ ಗಾಂಧಿ ಅಲ್ಲಿಯೂ ಸೋಲುವುದು ಗ್ಯಾರಂಟಿ ಎಂದರು.
ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರು ಪುತ್ರನಿಗಾಗಿ ರಾಯಬರೇಲಿ ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಜ್ಯಸಭೆ ಸದಸ್ಯರಾಗಿ ಸಂಸತ್ ಪ್ರವೇಶಿಸಿದ್ದಾರೆ. ಇದೀಗ ರಾಹುಲ್ ಗಾಂಧಿ ಸ್ಪರ್ಧೆ ಮಾಡಿರುವ ರಾಯಬರೇಲಿ ಕ್ಷೇತ್ರದಲ್ಲೂ ಸೋಲು ಕಟ್ಟಿಟ್ಟ ಬುತ್ತಿ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶ್ರೀವತ್ಸವ, ಎಂಎಲ್ಸಿ ಎಸ್.ರುದ್ರೇಗೌ, ಮಾಜಿ ಎಂಎಲ್ಸಿಗಳಾದ ಆರ್.ಕೆ.ಸಿದ್ದರಾಮಣ್ಣ, ಎಂ.ಬಿ.ಭಾನುಪ್ರಕಾಶ್, ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಎ.ಬಾಲರಾಜ್, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಶಿವರಾಜ್, ವಿನ್ಸಂಟ್ ರೋಡ್ರಿಗಸ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net