ಮೈಸೂರಿನಲ್ಲಿ ದೋಸೆ ಸವಿದ ರಾಹುಲ್ ಗಾಂಧಿ

mysore
Published on

ಮೈಸೂರು: ಕೇರಳದ ವಯನಾಡು ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸೋಮವಾರ ಸಂಜೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು.


ವಿಮಾನ ನಿಲ್ದಾಣದ ವಿಐಪಿ ಕೊಠಡಿಯಲ್ಲಿ ದೋಸೆ ಸವಿದರು. ಅರ್ಧ ಗಂಟೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಅವರಿಂದ ಮೈಸೂರು-ಕೊಡಗು ಕ್ಷೇತ್ರ ಮತ್ತು ಚಾಮರಾಜನಗರ ಕ್ಷೇತ್ರದ ಚುನಾವಣೆ ಕುರಿತು ಮಾಹಿತಿ ಪಡೆದುಕೊಂಡರು.


ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ತಕ್ಷಣವೇ ದೂರವಾಣಿ ಮೂಲಕ ಸಿದ್ದರಾಮಯ್ಯ ಅವರಿಗೆ ನಮಗೆ ಚುನಾವಣೆಗಿಂತ ನಿಮ್ಮ ಆರೋಗ್ಯ ಮುಖ್ಯ.

ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದರು ಎಂದು ವಿಜಯ್‌ಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾಗೇಶ್ ಕರಿಯಪ್ಪ ಜತೆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net