ಮೇ 2ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ

minister madhu bangarappa
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
Published on

ಶಿವಮೊಗ್ಗ: ಎಐಸಿಸಿ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ಮೇ 2ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಅಂದು ಮಧ್ಯಾಹ್ನ 12ರಿಂದ 2.30ರವರೆಗೆ ರಾಹುಲ್ ಗಾಂಧಿ ಸಮಯ ನೀಡಿದ್ದಾರೆ. ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಆಗಮಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಂದು ಯಾವುದೇ ರೋಡ್ ಶೋ ಇರುವುದಿಲ್ಲ. ಅಲ್ಲಮಪ್ರಭು ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ ಮತ್ತು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಗಳ ಮತದಾರರನ್ನು ಕೇಂದ್ರೀಕರಿಸಿಕೊಂಡು ಸಮಾವೇಶ ಆಯೋಜಿಸಲಾಗುವುದು ಎಂದರು.
ತಾರಾಮೆರುಗು:
ಶಿವಮೊಗ್ಗದಲ್ಲಿ ಮೊದಲ ಬಾರಿಗೆ ಫಿಲಂ ಛೇಂಬರ್ ನಮ್ಮ ಅಭ್ಯರ್ಥಿ ಪರ ಪ್ರಚಾರಕ್ಕೆ ಸಜ್ಜಾಗಿದೆ. ಏ.29 ಮತ್ತು 30ರಂದು ನಟರಾದ ದುನಿಯಾ ವಿಜಯ್, ಡಾಲಿ ಧನಂಜಯ್, ಧ್ರುವ ಸರ್ಜಾ, ಚಿಕ್ಕಣ್ಣ, ವಿಜಯ ರಾಘವೇಂದ್ರ, ನೆನಪಿರಲಿ ಪ್ರೇಮ್, ನಿಶ್ವಿಕಾ ನಾಯ್ಡು, ಅನುಶ್ರೀ, ನಿಧಿ ಸುಬ್ಬಯ್ಯ ನಾಯ್ಡು, ಚಂದನ್ ಶೆಟ್ಟಿ, ಅಕುಲ್ ಬಾಲಾಜಿ ಮುಂತಾದವರು ಬರಲಿದ್ದು ಬೈಂದೂರು ಸೇರಿ ಶಿವಮೊಗ್ಗದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ರೋಡ್ ಶೋ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಟಿ.ಚಂದ್ರಶೇಖರ್, ಪ್ರಮುಖರಾದ ಎಸ್.ಪಿ.ಶೇಷಾದ್ರಿ, ಜಿ.ಡಿ.ಮಂಜುನಾಥ್, ಸುವರ್ಣಾ ನಾಗರಾಜ್, ಚಿನ್ನಪ್ಪ, ಶಮಂತ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net