ಏ. 27ರಂದು ಉಚ್ಚಿಲಕ್ಕೆ ರಾಹುಲ್ ಗಾಂಧಿ

Rahul_Gandhi
Published on

ಉಡುಪಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಏ. 27ರಂದು ಉಡುಪಿಗೆ ಆಗಮಿಸಲಿದ್ದು, ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ಕಾರ‌್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾಂಗ್ರೆಸ್ ಈಗಾಗಲೇ 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಹೆಚ್ಚಿನ ನಾಯಕರು ಉಡುಪಿ ಜಿಲ್ಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಿಲ್ಲೆಯಲ್ಲಿ ಚುನಾವಣೆ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. 23ರಂದು ಮಧ್ಯಾಹ್ನ 3.30 ಗಂಟೆಗೆ ಬೈಂದೂರಿನಲ್ಲಿ ನಡೆಯುವ ಪಕ್ಷ ಕಾರ‌್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ನಂತರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 24ರಂದು 3 ಗಂಟೆಯಿಂದ 5ಗಂಟೆವರೆಗೆ ಸರ್ವಿಸ್ ಬಸ್ ನಿಲ್ದಾಣದಿಂದ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿವರೆಗೆ ರೋಡ್ ಶೋ ನಡೆಸಲಿದ್ದಾರೆ ಎಂದರು. ಕಾಂಗ್ರೆಸ್ ಅಭ್ಯರ್ಥಿ ಪ್ರಸಾದರಾಜ್ ಕಾಂಚನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net