ಶಿವಮೊಗ್ಗಕ್ಕೆ ನಾಳೆ ರಾಹುಲ್ ಗಾಂಧಿ ಆಗಮನ

congress
ಶಿವಮೊಗ್ಗದ ಹಳೇ ಜೈಲು ಆವರಣದಲ್ಲಿ ರಾಹುಲ್ ಗಾಂಧಿ ಪ್ರಚಾರ ಸಭೆಗೆ ತಯಾರಿ ನಡೆಯುತ್ತಿರುವುದು.
Published on

ಶಿವಮೊಗ್ಗ: ಪಕ್ಷದ ಅಭ್ಯರ್ಥಿ ಪರ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಎಐಸಿಸಿ ನಾಯಕ ರಾಹುಲ್ ಗಾಂಧಿ ಮೇ 2ರಂದು ಮಧ್ಯಾಹ್ನ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಹಳೇ ಜೈಲು ಆವರಣದಲ್ಲಿ ಏರ್ಪಡಿಸಿರುವ ಸಭೆಯಲ್ಲಿ ರಾಹುಲ್ ಭಾಷಣ ಮಾಡಲಿದ್ದಾರೆ.

ಇದಕ್ಕಾಗಿ ಬುಧವಾರ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿದವು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಕಾಂಗ್ರೆಸ್ ಮುಖಂಡರು ಸಿದ್ಧತೆ ಪರಿಶೀಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮುಂತಾದವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಬೈಂದೂರು ಹೊರತುಪಡಿಸಿ ಉಳಿದೆಲ್ಲ ವಿಧಾನಸಭಾ ಕ್ಷೇತ್ರಗಳಿಂದಲೂ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಏಳು ವಿಧಾನಸಭಾ ಕ್ಷೇತ್ರಗಳಿಂದ ಸುಮಾರು ಒಂದು ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕ್ಷೇತ್ರದಲ್ಲಿ ಪ್ರಚಾರ ಭರದಿಂದ ಸಾಗಿದೆ. ಮೇ 4ರಂದು ವಿವಿಧೆಡೆ ರೋಡ್ ಶೋ ನಡೆಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಸೂಡಾ ಮಾಜಿ ಅಧ್ಯಕ್ಷ ಎನ್. ರಮೇಶ್, ಪ್ರಮುಖರಾದ ಚಂದ್ರಭೂಪಾಲ, ಮಂಜುನಾಥ್ ಬಾಬು ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net