ಮೀಸಲಾತಿ ರದ್ದುಗೊಳಿಸುವ ರಾಹುಲ್‌ಗಾಂಧಿ ಹೇಳಿಕೆ ಸಲ್ಲ

0000
Published on

ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಕಾಂಗ್ರೆಸ್ ವಿರುದ್ಧ ಧಿಕ್ಕಾರ

ರಾಮನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ತೆಗೆದುಹಾಕುತ್ತೇವೆ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಗುರುವಾರ ರಾಮನಗರದ ಐಜೂರು ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.
ಅಮೆರಿಕಾದಲ್ಲಿ ಕುಳಿತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ರದ್ದುಗೊಳಿಸುವ
ರಾಹುಲ್ ಗಾಂಧಿ ಭಾವಚಿತ್ರ ಹಿಡಿದು ಆಕ್ರೋಶ ಹೊರಹಾಕಿ, ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದರು.
ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಹಾರೋಹಳ್ಳಿ ಚಂದ್ರು ಮಾತನಾಡಿ, ದೇಶ ಸ್ವಾತಂತ್ರ್ಯವಾಗಿ 78 ವರ್ಷ ಕಳೆದರೂ ಎಸ್ಸಿ-ಎಸ್ಟಿ ಹಾಗೂ ಒಬಿಸಿಗಳಿಗೆ ಶಾಶ್ವತ ಪರಿಹಾರ ನೀಡುವ ಕೆಲಸವನ್ನು ಕಾಂಗ್ರೆಸ್ ಈ ತನಕ ಮಾಡಿಲ್ಲ. ಬದಲಾಗಿ ಪರಿಶಿಷ್ಟ ಜಾತಿ, ಪಂಗಡದವರ ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಎಂದು ಸಂಸದ ರಾಹುಲ್‌ಗಾಂಧಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.
ದಲಿತಪರವಾದ ಅಭಿವೃದ್ಧಿಗೆ ಕಾಂಗ್ರೆಸ್ ಯಾವುದೇ ಯೋಜನೆ ರೂಪಿಸಿಲ್ಲ. ಹಾಗಾಗಿ ದಲಿತರ ಪಾಲಿಗೆ ಕಾಂಗ್ರೆಸ್ ಉರಿಯುವ ಮನೆ ಇದ್ದಂತೆ. ದಲಿತರನ್ನು ಕೇವಲ ಮತ ಬ್ಯಾಂಕ್ ಆಗಿಸಿಕೊಂಡು, ಒಂದು ಕೈಯಲ್ಲಿ ಕೊಡುವ ನಾಟಕವಾಡಿ ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತದೆ ಎಂದು ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ಗೆ, ಮುಂಬರುವ ಚುನಾವಣೆಯಲ್ಲಿ ದಲಿತ ಹಾಗೂ ಹಿಂದುಳಿದ ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಸಿದರು.

ಪ್ರತಿಕೃತಿಗೆ ಬೆಂಕಿ ಹಚ್ಚಲು ಬಿಡದ ಪೊಲೀಸರು
ರಾಹುಲ್ ಗಾಂಧಿ ಪ್ರತಿಕೃತಿ ದಹನಕ್ಕೆ ಬಿಜೆಪಿ ಮುಖಂಡರು ಮುಂದಾದಾಗ ಪೊಲೀಸರು ಪ್ರತಿಕೃತಿಯನ್ನು ಪ್ರತಿಭಟನಾಕಾರರಿಂದ ಕಿತ್ತು, ಬೆಂಕಿ ಹಚ್ಚುವುದನ್ನು ತಪ್ಪಿಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.

"ರಾಹುಲ್ ಗಾಂಧಿ ವಿದೇಶ ಪ್ರಯಾಣ ಮಾಡಿದಾಗಲೆಲ್ಲಾ. ದೇಶದ ಮಾನ ಕಳೆಯುವ ಕೆಲಸ ಮಾಡುತ್ತಿದ್ದಾರೆ. ಈಗ ಅಮೆರಿಕದಲ್ಲಿದ್ದು, ಪರಿಶಿಷ್ಟ ಜಾತಿ, ಪಂಗಡದವರಿಗೆ ಸಂವಿಧಾನದ ಮೂಲಕ ಅಂಬೇಡ್ಕರ್ ಕಲ್ಪಿಸಿಕೊಟ್ಟಿರುವ ಮೀಸಲಾತಿಯನ್ನು ತೆಗೆದು ಹಾಕುತ್ತೇವೆ ಎಂಬ ಹೇಳಿಕೆ ನೀಡಿ ದಲಿತರಿಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು."
-ಕಾಳಯ್ಯ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ, ರಾಮನಗರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net