

ಬೆಳಗಾವಿ: ರಾಜ್ಯ ಕಾಂಗ್ರೆಸ್ ಯುವ ಟಕದ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ 63ನೇ ಜನ್ಮದಿನ ಪ್ರಯುಕ್ತ ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ "ಬೃಂಗಾ' ಎಂಬ ಸಿಂಹವನ್ನು ಒಂದು ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ ಎಂದು ವಲಯ ಅರಣ್ಯಾಧಿಕಾರಿ ಪವನ ಕುರನಿಂಗ ತಿಳಿಸಿದ್ದಾರೆ. ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕಳೆದ ತಿಂಗಳು ಈ ಸಿಂಹವನ್ನು ಪ್ರವಾಸಿಗರ ವೀಣೆಗೆ ಮುಕ್ತಗೊಳಿಸಿದ್ದರು.