

ರಾಣೆಬೆನ್ನೂರ: ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಸ್ಥಾನದಲ್ಲಿರದ ಕಾರಣ ತಾಲೂಕಿನ ರಾಹುತನಕಟ್ಟಿ ಗ್ರಾಪಂ ಪಿಡಿಒ ರವಿಕುಮಾರ ಎಚ್. ಅವರನ್ನು ಅಮಾನತು ಮಾಡಿ ಸಿಇಒ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ರುಚಿ ಬಿಂದಲ್ ಇತ್ತೀಚೆಗೆ ರಾಹುತನಕಟ್ಟಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ್ದರು. ಈ ಸಮಯದಲ್ಲಿ ಪಿಡಿಒ ಗ್ರಾಪಂನಲ್ಲಿ ಇರಲಿಲ್ಲ. ಕೇಂದ್ರ ಸ್ಥಾನದಲ್ಲಿದ್ದು ಕೆಲಸ ಮಾಡುವಂತೆ ನಿಯಮವಿದೆ. ಪಿಡಿಒ ನಿಯಮ ಪಾಲಿಸದೆ ಕರ್ತವ್ಯ ಲೋಪ ಎಸಗಿದ್ದಕ್ಕಾಗಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.