

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಕಾರ್ಯಕ್ರಮ ಗುರುವಾರ ನಡೆಯಿತು.
ಕ್ಷೇತ್ರದ ಪ್ರಧಾನ ಅರ್ಚಕ ಡಿ.ರಾಮಚಂದ್ರ ಭಟ್ ದೈಲ, ಅರ್ಚಕ ದಿನೇಶ್ ಭಟ್ ದೈಲ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಗ್ಗೆ ಕಲಶಾರಾಧನೆ, ಕಲಶಾವಾಸ, ಹೋಮ, ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಗೌರವಾಧ್ಯಕ್ಷ ರಾಜೇಶ್ ಶೆಟ್ಟಿ ಶೀತಾಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಗೌಡ ಮತ್ತಾವು, ರಾಯಿ ಗ್ರಾ.ಪಂ ಅಧ್ಯಕ್ಷ ಸಂತೋಷ್ ಕುಮಾರ್ ರಾಯಿಬೆಟ್ಟು, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗೌಡ ಕಾರಂಬಡೆ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಚೌಟ ಮಡಂದೂರು, ಭಜನಾ ಮಂಡಳಿ ಅಧ್ಯಕ್ಷ ರಾಜೇಶ್ ಶಿವನಗರ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಪ್ರದೀಪ್ ಮಿಯಾಲು, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಸಮಿತ್ ಶಿವನಗರ, ಕೋಶಾಧಿಕಾರಿ ಗಣೇಶ್ ಬರೆಬಾಯಿ, ದಿನೇಶ್ ಸುವರ್ಣ ರಾಯಿ, ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ದಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಶ್ರೀಮಹಾಲಿಂಗೇಶ್ವರ ಭಜನಾ ಮಂಡಳಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.