ರಾಯಚೂರಲ್ಲಿ 15 ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಕರೊನಾ ಸೋಂಕು

250720 Raichur Police Training Building
ರಾಯಚೂರಿನ ಪೊಲೀಸ್ ತರಬೇತಿ ಕೇಂದ್ರದ ಕಟ್ಟಡ.
Published on

ರಾಯಚೂರು: ಸ್ಥಳೀಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದ 15 ಪ್ರಶಿಕ್ಷಣಾರ್ಥಿಗಳಿಗೆ ಕರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರವನ್ನು ಸೀಲ್‌ಡೌನ್ ಮಾಡಲಾಗಿದೆ. ಕೇಂದ್ರದಲ್ಲಿ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ 100 ಪ್ರಶಿಕ್ಷಣಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಕೆಲವರಿಗೆ ಜ್ವರ, ಕೆಮ್ಮಿನ ಲಕ್ಷಣಗಳು ಕಂಡಿದ್ದರಿಂದ ಪರೀಕ್ಷೆಗೊಳಗಾಗಿದ್ದರು. ಸೋಂಕಿತರನ್ನು ಕೋವಿಡ್ ಕೇರ್‌ನಲ್ಲಿ ಇರಿಸಲಾಗಿದೆ. 36 ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ಪ್ರಸ್ತುತ 40 ದಿನಗಳಿಂದ ನಡೆಯುತ್ತಿದ್ದ ತರಬೇತಿಗೆ ತಾತ್ಕಾಲಿಕ ತಡೆಯಾಗಿದೆ. ರೋಗ ಲಕ್ಷಣಗಳು ಇಲ್ಲದವರನ್ನು ಮಾತ್ರ ಮೈದಾನಕ್ಕೆ ಬಿಡಲಾಗುತ್ತಿದೆ. ಕ್ವಾರಂಟೈನ್‌ನಲ್ಲಿ ಇರುವವರಿಗೆ ನಿತ್ಯ ಕಷಾಯ, ಉತ್ತಮ ಊಟ ನೀಡಲಾಗುತ್ತಿದೆ. ತರಬೇತಿ ಕೇಂದ್ರವನ್ನು ಸ್ಯಾನಿಟೈಜೇಷನ್ ಮಾಡಲಾಗಿದೆ ಎಂದು ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net