ಹಾಸ್ಟೆಲ್‌ಗಳನ್ನು ತ್ವರಿತವಾಗಿ ಆರಂಭಿಸಿ

Raichur students protest
ರಾಯಚೂರಿನ ಡಿಸಿ ಕಚೇರಿ ಸ್ಥಾನಿಕ ಅಧಿಕಾರಿ ಪರಶುರಾಮಗೆ ಎಬಿವಿಪಿಯಿಂದ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಭೀಮೇಶ್, ಸಂಜಯ್ ಹತ್ತಿಕಟ್ಟಿಗಿ, ಶಾಂತಕುಮಾರ್, ಶ್ರೀನಿಧಿ, ಮೋಹನ್ ಸಾಗರ್, ರವಿ, ನರಸಪ್ಪ, ಸಂದೀಪ್, ಸುದೀಪ್, ರಾಜು ಇದ್ದರು.
Published on

ರಾಯಚೂರು: ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳನ್ನು ಹೆಚ್ಚಿಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರಯಾಣಿಸಲು ಅನುಕೂಲ ವಾಗುವಂತೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡುವುದು ಸೇರಿ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಎಬಿವಿಪಿಯಿಂದ ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿ ವರೆಗೆ ಮೆರವಣಿಗೆ ಮೂಲಕ ಆಗಮಿಸಿ ಡಿಸಿ ಕಚೇರಿ ಸ್ಥಾನಿಕ ಅಧಿಕಾರಿ ಪರಶುರಾಮಗೆ ಮನವಿ ಸಲ್ಲಿಸಲಾಯಿತು. ಹಾಸ್ಟೆಲ್‌ಗಳ ಪ್ರವೇಶ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ವಿದ್ಯಾರ್ಥಿ ವೇತನ, ಹಾಸ್ಟೆಲ್ ಹಾಗೂ ಬಸ್‌ಗಳ ಸಂಖ್ಯೆ ಹೆಚ್ಚಳ ಮಾಡಬೇಕೆಂದು ಆಗ್ರಹಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net