ಲಾರಿ-ಕಾರು ಡಿಕ್ಕಿಗೆ ಸ್ಥಳದಲ್ಲೇ ನಾಲ್ವರು ಸಾವು: ಅಂತ್ಯಸಂಸ್ಕಾರಕ್ಕೆ ಹೋಗಿ ಬರುತ್ತಿದ್ದವರ ದುರಂತ ಅಂತ್ಯ

Accident
Published on

ರಾಯಚೂರು: ಕಾರು ಮತ್ತು ಲಾರಿ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ದುರಾದೃಷ್ಟಕರವೆಂದರೆ ಅಂತ್ಯಸಂಸ್ಕಾರಕ್ಕೆ ಹೋಗಿ ಬರುತ್ತಿದ್ದಾಗ ದುರಂತ ಅಂತ್ಯ ಕಂಡಿದ್ದಾರೆ. ಮೃತರು ಲಿಂಗಸೂಗೂರು ತಾಲೂಕಿನ ದೇವರಬೂಪೂರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದ್ದು, ಇನ್ನಷ್ಟು ಮಾಹಿತಿ ಬರಬೇಕಿದೆ.

ಗುರುವಾರ ತಾಲೂಕು ಪಂಚಾಯತ್ ಮಾಜಿ ಸದಸ್ಯ ಶಿವರಾಜ್ ಮರಣ ಹೊಂದಿದ್ದರು. ಅವರ ಶವಸಂಸ್ಕಾರಕ್ಕೆ ತೆರಳಿದ್ದ ಐವರು ಕಾರ್ಯ ಮುಗಿಸಿ ಕಾರಿನಲ್ಲಿ ಹಿಂದಿರುಗುವಾಗ ಎದುರು ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ.

ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುವನ್ನು ಜಾಲಹಳ್ಳಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net