ರಾಯಚೂರಿನಲ್ಲಿ ಕ್ರೂಸರ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ದುರ್ಮರಣ! Raichur Accident

Raichur Accident
Published on

Raichur Accident : ಕ್ರೂಸರ್ ವಾಹನ ಪಲ್ಟಿಯಾಗಿ ಚಾಲಕ ಮತ್ತು ಮಂತ್ರಾಲಯ ಮಠದ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳು ಸೇರಿ ಒಟ್ಟು ನಾಲ್ವರು ದುರಂತ ಸಾವಿಗೀಡಾಗಿದ್ದಾರೆ. ಈ ಘಟನೆ ರಾಯಚೂರಿನ ಸಿಂಧನೂರು ಬಳಿ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಬಳ್ಳಾರಿಯ ಹಯವದನ (18), ಮಂತ್ರಾಲಯದವರಾದ ಸುಜಯೇಂದ್ರ(22) ಹಾಗೂ ಕೊಪ್ಪಳದ ಅಭಿಲಾಷ್ (20) ಎಂದು ಗುರುತಿಸಲಾಗಿದೆ. ಚಾಲಕ ಶಿವ (20) ಕೂಡ ಅಸುನೀಗಿದ್ದಾನೆ. ಹಂಪಿಯಲ್ಲಿ ನಡೆಯುತ್ತಿರುವ ಶ್ರೀ ನರಹರಿ ತೀರ್ಥರ ಆರಾಧನೆ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮಂತ್ರಾಲಯದಿಂದ ಹಂಪಿಗೆ ಪ್ರಯಾಣಿಸುತ್ತಿದ್ದ ವೇಳೆ ಸಿಂಧನೂರು ಬಳಿ ಈ ದುರ್ಘಟನೆ ಸಂಭವಿಸಿದೆ.

ಸಿಂಧನೂರು ನಗರದ ಹೊರವಲಯದ ಬ್ರಿಡ್ಜ್ ಬಳಿ ಕ್ರೂಸರ್​ ವಾಹನದ ಟೈರ್​ ಬ್ಲಾಸ್ಟ್​ ಆಗಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿದೆ. ಅದರಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಹಾಗೂ ಚಾಲಕ ಸಾವಿಗೀಡಾಗಿದ್ದಾರೆ. ಈ ಘಟನೆಯಲ್ಲಿ ಹತ್ತು ವಿದ್ಯಾರ್ಥಿಗಳಿಗೆ ತೀವ್ರ ಗಾಯಗಳಾಗಿದ್ದು ಸಿಂಧನೂರು ಆಸ್ಪತ್ರೆಗೆ ಸೇರಿಸಲಾಗಿದೆ.

ಘಟನಾ ಸ್ಥಳಕ್ಕೆ ಸಿಂಧನೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net