ರಾಯಚೂರು ಎಡಿಸಿಯಾಗಿ ಶಿವಪ್ಪ ಯಲ್ಲಪ್ಪ ಅಧಿಕಾರ ಸ್ವೀಕಾರ

SHIVAPPA BAJANTRI
ರಾಯಚೂರು ಎಡಿಸಿ ಶಿವಪ್ಪ ಯಲ್ಲಪ್ಪ ಭಜಂತ್ರಿ
Published on

ರಾಯಚೂರು: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವಪ್ಪ ಯಲ್ಲಪ್ಪ ಭಜಂತ್ರಿ ಸೋಮವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಹುಬ್ಬಳ್ಳಿ ದಾರವಾಡ ತ್ವರಿತ ಬಸ್ ಸಾರಿಗೆ ವ್ಯವಸ್ಥೆ (ಬಿಆರ್‌ಟಿಎಸ್) ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅವರನ್ನು ಜು.18ರಂದು ರಾಯಚೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಿ ಸರ್ಕಾರ ಆದೇಶಿಸಿತ್ತು.

ಈ ಹಿಂದೆ ರಾಯಚೂರು ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ಆರ್ ದುರುಗೇಶ ರಿಮ್ಸ್ ಮುಖ್ಯ ಆಡಳಿತಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಇದೇ ವೇಳೆ ಕಚೇರಿಯ ಸಿಬ್ಬಂದಿ ನಿರ್ಗಮಿತ ಅಪರ ಜಿಲ್ಲಾಧಿಕಾರಿ ದುರಗೇಶ ಅವರನ್ನು ಬೀಳ್ಕೊಟ್ಟು ನೂತನ ಎಡಿಸಿ ಶಿವಪ್ಪ ಯಲ್ಲಪ್ಪ ಭಜಂತ್ರಿ ಅವರನ್ನು ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net