ಹೆಚ್ಚುವರಿ ಶಿಕ್ಷಕರ ನೇಮಕ ಅಗತ್ಯ: ಎಸ್‌ಎಫ್ಐ ಒತ್ತಾಯ

sfi raichur
Published on

ರಾಯಚೂರು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಪದವೀಧರ ಶಿಕ್ಷಕರ ಹುದ್ದೆಗಳನ್ನು ಹೆಚ್ಚಿಸುವಂತೆ ಭಾರತೀಯ ವಿದ್ಯಾರ್ಥಿ ಪರಿಷತ್(ಎಸ್‌ಎಫ್‌ಐ)ನಿಂದ ನಗರದ ಡಿಸಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಸರ್ಕಾದಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ 5,267 ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗಿದ್ದು, 2024-25ನೇ ಸಾಲಿಗೆ ಈವರೆಗೆ ರಾಜ್ಯದಲ್ಲಿ 20 ಸಾವಿರಕ್ಕೂ ಹೆಚ್ಚು ಶಿಕ್ಷಕರು ಸೇವಾ ನಿವೃತ್ತಿ ಹೊಂದಿದ್ದಾರೆ. 2025-26ನೇ ಸಾಲಿನಲ್ಲಿ 40 ಸಾವಿರಕ್ಕೂ ಹೆಚ್ಚಿನ ಶಿಕ್ಷಕರು ನಿವೃತ್ತರಾಗಲಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಎದುರಾಗಲಿದ್ದು, 10 ಸಾವಿರಕ್ಕೂ ಹೆಚ್ಚಿನ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಅಗತ್ಯವಿದೆ ಎಂದು ಒತ್ತಾಯಿಸಲಾಯಿತು.

ಸರ್ಕಾರದಿಂದ ಹೊರಡಿಸಲಾದ ಶಿಕ್ಷಕರ ನೇಮಕಾತಿ ಆದೇಶದಲ್ಲಿ ಬದಲಾವಣೆ ತಂದು ಈಗ ಭರ್ತಿ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳ ಜತೆಗೆ ಹೆಚ್ಚುವರಿಯಾಗಿ ಐದು ಸಾವರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ರಮೇಶ ವೀರಾಪೂರ, ಉಪಾಧ್ಯಕ್ಷ ಪವನ್‌ಕುಮಾರ್, ಜಂಟಿ ಕಾರ್ಯದರ್ಶಿ ಮಹಾಲಿಂಗ, ಶಿಕ್ಷಕ ಆಕಾಂಕ್ಷಿಗಳಾದ ರಾಜೇಶ್ವರಿ, ಮಹಾದೇವಿ, ಹನುಮಂತ, ಬಸವರಾಜ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net