

ರಾಯಚೂರು: ರಾಜ್ಯ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದರೊಂದಿಗೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯುವ ಘಟಕದ ಜಿಲ್ಲಾಧ್ಯಕ್ಷ ಸೋಮನಾಥ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದರು. ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಕೆಲವು ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಕೆಲವು ಇಳುವರಿ ಕಡಿಮೆ ಬಂದಿವೆ. ಈ ಹಿನ್ನೆಲೆಯಲ್ಲಿ ರೈತರಿಗೆ ಪರಿಹಾರ ನೀಡಬೇಕು. ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳಕ್ಕೆ ಬೆಳಗಾವಿ ಅಧಿವೇಶನದಲ್ಲಿ ನಿರ್ಧಾರ ಕೈಗೊಳ್ಳಬೇಕು. ಬಗರ್‌ಹುಕುಂ ಸಾಗುವಳಿದಾರರಿಗೆ ಪಟ್ಟಾ ಕೊಡಬೇಕು. ಕೃಷಿ ಪಂಪ್‌ಸೆಟ್‌ಗೆ ಮೀಟರ್ ಅಳವಡಿಸುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಪದಾಧಿಕಾರಿಗಳಾದ ನರಸಿಂಹನಾಯಕ, ಸಂಜೀವಕುಮಾರ, ನಾಗರಾಜ ನಾಯಕ, ಸಂಜೀವ ನಾಯಕ ಇದ್ದರು.