ಕೃಷಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಕರ್ನಾಟಕ ರಾಜ್ಯ ರೈತ ಸಂಘದಿಂದ ಧರಣಿ

040422 Raichur Karnataka State Farmers Association Protest
ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಯಿತು.
Published on

ರಾಯಚೂರು: ಸರ್ಕಾರಿ ಕಚೇರಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಸೋಮವಾರ ಧರಣಿ ನಡೆಸಲಾಯಿತು.

ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ತಿದ್ದುಪಡಿ, ಭೂ ಸುಧಾರಣೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆಗಳನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕಂದಾಯ, ಭೂಮಾಪನ ಇಲಾಖೆಯಲ್ಲಿ ರೈತರ ಶೋಷಣೆ ನಡೆಯುತ್ತಿದ್ದು, ರೈತರ ಕೆಲಸಗಳನ್ನು ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದ್ದು, ಅದನ್ನು ಸರಿಪಡಿಸಬೇಕು. ಫಸಲ್ ಬಿಮಾ ಯೋಜನೆಯಲ್ಲಿ 2019 ರಿಂದ 2021ರವರೆಗೆ ಹಣ ತುಂಬಿದ ರೈತರಿಗೆ ಕೂಡಲೆ ಪರಿಹಾರ ನೀಡಬೇಕು. ಸಿಂಧನೂರಿನ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಶೋಷಣೆ ನಡೆಯುತ್ತಿದ್ದು, ಅದನ್ನು ಪರಿಶೀಲಿಸಿ ತಡೆಯಬೇಕು. ಪ್ರತಿ ತಾಲೂಕಿನಲ್ಲಿ ಮೆಣಸಿನಕಾಯಿ ವ್ಯಾಪಾರ ಆರಂಭಿಸಬೇಕು. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮನಬಂದಂತೆ ಕಮೀಷನ್ ಪಡೆಯುವುದಕ್ಕೆ ತಡೆಯೊಡ್ಡಬೇಕು ಎಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net