ರಾಯಚೂರಿಗೆ ಏಮ್ಸ್ ಸಂಸ್ಥೆ ಕಲ್ಪಿಸಿ

26-DVD-2
ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ಆಗ್ರಹಿಸಿ ದೇವದುರ್ಗದಲ್ಲಿ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿಗೆ ತಾಲೂಕು ಏಮ್ಸ್ ಹೋರಾಟ ಸಮಿತಿ ಮನವಿ ಸಲ್ಲಿಸಿತು. ಕಸಾಪ ತಾಲೂಕು ಅಧ್ಯಕ್ಷ ಎಚ್.ಶಿವರಾಜ, ಮುಖಂಡರಾದ ಹನುಮಂತಪ್ಪ ಮನ್ನಾಪುರ, ಶಿವರಾಜ ರುದ್ರಾಕ್ಷಿ, ಶ್ರೀನಿವಾಸ ದಾಸರ್, ಟಿ.ಜಯರಾಜ, ಬಸನಗೌಡ ಪಾಟೀಲ್, ರಫೀಕ್ ಸಾಬ್ ಅನ್ವರಿ, ಶಾಮ್ ಸುಂದರ್, ರಂಗನಾಥ್ ಭಜಂತ್ರಿ, ಶಾಂತಗೌಡ ಇತರರಿದ್ದರು.
Published on

ದೇವದುರ್ಗ: ರಾಯಚೂರು ಜಿಲ್ಲೆಗೆ ಏಮ್ಸ್ ಸಂಸ್ಥೆ ಮಂಜೂರು ಮಾಡುವಂತೆ, ಏಮ್ಸ್ ಹೋರಾಟ ಸಮಿತಿ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಇಲ್ಲಿನ ಮಿನಿವಿಧಾನಸೌಧ ಮುಂದೆ ಪಟ್ಟಣದ ಹೋರಾಟ ಸಮಿತಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿಗೆ ಸೋಮವಾರ ಮನವಿ ಸಲ್ಲಿಸಿತು.

ರಾಯಚೂರಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಂಜೂರು ಮಾಡಬೇಕು ಎಂದು 655ದಿನಗಳಿಂದ ನಡೆಯುತ್ತಿರುವ ಧರಣಿ ಸೋಮವಾರ ದೆಹಲಿಯಲ್ಲಿ ಆರಂಭವಾಗಿದೆ. ರಾಜ್ಯ ಸರ್ಕಾರದ ಸಚಿವ ಸಂಪುಟ ಏಮ್ಸ್ ಸಂಸ್ಥೆ ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ನಿರಂತರ ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಕೇಂದ್ರ ಸರ್ಕಾರ ಏಮ್ಸ್ ಸಂಸ್ಥೆ ಮಂಜೂರು ಮಾಡಬೇಕು. ಅದಕ್ಕೆ ಬೇಕಾದ ಅಗತ್ಯ ಸೌಲಭ್ಯವಿದ್ದು ತ್ವರಿತಗತಿಯಲ್ಲಿ ಅನುದಾನ ನೀಡಿ ಈ ಭಾಗದ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕು. ನಿರ್ಲಕ್ಷ್ಯ ಮಾಡಿದರೆ ಹೋರಾಟ ನಿರಂತರವಾಗಿ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net