ಆಂಧ್ರಪ್ರದೇಶಕ್ಕೆ ಬಸ್ ಸಂಚಾರ ಆರಂಭ

Andhara Pradesh bus Starts
ರಾಯಚೂರಿನ ಕೇಂದ್ರ ಬಸ್ ನಿಲ್ದಾಣದಿಂದ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ಬುಧವಾರ ಬಸ್ ಸಂಚಾರ ಆರಂಭಗೊಂಡಿತು.
Published on

ರಾಯಚೂರು: ಅಂತಾರಾಜ್ಯ ಬಸ್ ಸಂಚಾರ ಬುಧವಾರದಿಂದ ಆರಂಭಗೊಂಡಿದ್ದು, ಮೊದಲ ಹಂತರದಲ್ಲಿ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ಬಸ್ ಸಂಚಾರ ಶುರುವಾಗಿದೆ. ಕರೊನಾ ಸೋಂಕು ಹರಡದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಬಸ್ ಸಂಚಾರ ಆರಂಭಿಸಲಾಗಿದೆ. ಪ್ರಸ್ತುತ ಮಂತ್ರಾಲಯಕ್ಕೆ 5 ಹಾಗೂ ಮಂತ್ರಾಲಯ ಮಾರ್ಗವಾಗಿ ಬೆಂಗಳೂರಿಗೆ ಎರಡು ಬಸ್‌ಗಳ ಸಂಚಾರ ಆರಂಭಗೊಂಡಿದೆ.

ರಾಯಚೂರಿನ ಕೇಂದ್ರ ಬಸ್ ನಿಲ್ದಾಣದಿಂದ ಮಂತ್ರಾಲಯಕ್ಕೆ ತೆರಳಿದ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಿತ್ತು. ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಇನ್ನೂ ರಾಯರ ದರ್ಶನಕ್ಕೆ ಅವಕಾಶ ನೀಡದಿರುವುದರಿಂದ ಮಂತ್ರಾಲಯಕ್ಕೆ ತೆರಳುವವರ ಸಂಖ್ಯೆ ಕಡಿಮೆಯಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net