ಆರೋಗ್ಯ ಉಚಿತ ತಪಾಸಣೆ ಶಿಬಿರ

Sharanabasava Patil raichur
ಡಾ.ಶರಣಬಸವ ಪಾಟೀಲ್ ಜೋಳದಹೆಡಗಿ, ಗುಲ್ಬರ್ಗ ವಿವಿ ಸಿಂಡಿಕೇಟ್ ಸದಸ್ಯ
Published on

ರಾಯಚೂರು: ತಾಲೂಕಿನ ಆಶಾಪುರ ಗ್ರಾಮದ ಬಸವ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಸೆ.24ರಂದು ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜಪ್ಪ ಗೌಡರ 75ನೇ ಜನ್ಮದಿನದ ಸ್ಮರಣಾರ್ಥ ಆರೋಗ್ಯ ಉಚಿತ ತಪಾಸಣೆ ಮತ್ತು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಗುಲ್ಬರ್ಗ ವಿವಿ ಸಿಂಡಿಕೇಟ್ ಸದಸ್ಯ ಡಾ.ಶರಣಬಸವ ಪಾಟೀಲ್ ಜೋಳದಹೆಡಗಿ ತಿಳಿಸಿದರು.

ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ರೋಟರಿ ಕ್ಲಬ್ ಸೆಂಟ್ರಲ್, ಆರೋಗ್ಯ ಇಲಾಖೆ ಮತ್ತು ವೈದೇಹಿ ಆಸ್ಪತ್ರೆ ಸಹಯೋಗದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದ್ದು, ನೇತ್ರದಾನಕ್ಕೆ ನೋಂದಣಿ ಕಾರ್ಯವನ್ನು ನಡೆಸಲಾಗುತ್ತಿದೆ ಎಂದರು.

ಬೆಂಗಳೂರಿನಿಂದ ತಜ್ಞ ವೈದ್ಯರು ಆಗಮಿಸಲಿದ್ದು, ಹೃದಯ ತೊಂದರೆ, ಕ್ಯಾನ್ಸರ್, ಕಿಡ್ನಿಯಲ್ಲಿ ಕಲ್ಲು, ನರ ಸಂಬಂಧಿತ ಸಮಸ್ಯೆ, ಚಿಕ್ಕ ಮಕ್ಕಳ ತಪಾಸಣೆ ಹಾಗೂ ಕಣ್ಣಿನ ತಪಾಸಣೆ ನಡೆಸಿ ಅಗತ್ಯವಿದ್ದವರಿಗೆ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗುತ್ತಿದೆ ಎಂದರು.

ಬಿಚ್ಚಾಲಿಯ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಮಂಗಳವಾರ ಪೇಟೆ ಹಿರೇಮಠದ ವೀರ ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ಡಾ.ಶಿವರಾಜ ಪಾಟೀಲ್, ಬಸನಗೌಡ ದದ್ದಲ್ ಸೇರಿದಂತೆ ಇತರ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ರೋಟರಿ ಕ್ಲಬ್ ಸೆಂಟ್ರಲ್‌ನ ಸದಸ್ಯರಾದ ಪ್ರಮೋದಕುಮಾರ, ವಿರುಪಾಕ್ಷಿಗೌಡ ಆಶಾಪುರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net