ರಾಯಚೂರಿನ ಆಶಾಪುರ ರಸ್ತೆ ದುರಸ್ತಿಗೊಳಿಸಿ

03082022 raichur news
Published on

ರಾಯಚೂರು: ನಗರದ ಅನೇಕ ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಆಶಾಪುರ ರಸ್ತೆ ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ರಸ್ತೆ ದುರಸ್ತಿಗೆ ಶೀಘ್ರ ಕ್ರಮಕೈಗೊಳ್ಳುವಂತೆ ಎಸ್‌ಡಿಪಿಐ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಪಕ್ಷದ ಪ್ರಮುಖರು ಮಂಗಳವಾರ ಮನವಿ ಸಲ್ಲಿಸಿದರು. ಧೂಳಿನಿಂದ ಸಂಕಷ್ಟ ಎದುರಿಸುತ್ತಿದ್ದ ಜನರಿಗೆ ಮಳೆಯಾದ ನಂತರ ತಗ್ಗುಗುಂಡಿ ಹೆಚ್ಚಾಗಿ ಹೆಚ್ಚಿನ ತೊಂದರೆ ಅನುಭವಿಸುವಂತಾಗಿದೆ. ಈ ಮಾರ್ಗದಲ್ಲಿ ರಾಜಮಾತಾ ಹಾಗೂ ಇಸ್ಕಾನ್ ದೇವಸ್ಥಾನವಿದೆ. ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದ್ದರೂ ಮಂದಗತಿಯಲ್ಲಿ ನಡೆಯುತ್ತಿರುವುದರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net