ಬೆಂಗಳೂರಿನಲ್ಲಿ ಮಾಹಿತಿ ಹಕ್ಕು ವೇದಿಕೆಯ ವಾರ್ಷಿಕೋತ್ಸವ

IMG-20241213-WA0040
Published on

ರಾಯಚೂರು: ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭವನ್ನು ಡಿ.15ರಂದು ಬೆಂಗಳೂರಿನ ಶೇಷಾದ್ರಿಪುರಂನ ಕುಮಾರಪಾರ್ಕ್ ಗಾಂಧಿ ಭವನದ ಬಾಪೂಜಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಬ್ಜಲಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆಯನ್ನು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಹಾಗೂ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ವೇದಿಕೆಯ ರಾಜ್ಯಾಧ್ಯಕ್ಷ ಹೇಮಂತ ನಾಗರಾಜು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಹಿತಿ ಹಕ್ಕಿನ ಕುರಿತು ಕಾರ್ಯಾಗಾರವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನ ಮಾಹಿತಿ ಹಕ್ಕು ಅದ್ಯಯನ ಕೇಂದ್ರದ ಸಂಸ್ಥಾಪಕ ವೀರೇಶ ಬೆಳ್ಳೂರು, ಬೆಳಗಾವಿ ಉತ್ತರ ಕರ್ನಾಟಕ ಹೋರಾಟ ವೇದಿಕೆಯ ರಾಜ್ಯಾಧ್ಯಕ್ಷ ಭೀಮಪ್ಪ ಗುಂಡಪ್ಪ ಗಡಾದ, ರಾಜ್ಯ ಮಾಹಿತಿ ಆಯೋಗದ ನಿವೃತ್ತ ಆಯುಕ್ತ ಕೃಷ್ಣಮೂರ್ತಿ, ಗ್ರಾಹಕ ಹಕ್ಕುಗಳ ಶಿಕ್ಷಣ ಮತ್ತು ಜಾಗೃತಿ ಟ್ರಸ್ಟ್ ಅಧ್ಯಕ್ಷ ವೈ.ಜೆ.ಮುರುಳಿಧರನ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಈರಣ್ಣ ಯಾಪಲದಿನ್ನಿ, ಪ್ರಮುಖರಾದ ಎಂ.ಎನ್.ಮೈತ್ರಿಕರ್, ಸುಧೀರ, ಬಸವರಾಜ ಹೊಸೂರು ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net