ಫಲಾನುಭವಿಗಳ ಸಮ್ಮೇಳನಕ್ಕೆ ಸಿದ್ಧತೆ ಮಾಡಿಕೊಳ್ಳಿ

180223 Raichur DC Meeting
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಗಂಣದಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅಧ್ಯಕ್ಷತೆಯಲ್ಲಿ ಫಲಾನುಭವಿಗಳ ಸಮ್ಮೇಳನ ಕುರಿತು ಪೂರ್ವಭಾವಿ ಸಭೆ ಜರುಗಿತು.
Published on

ರಾಯಚೂರು: ಫಲಾನುಭವಿ ಆಧಾರಿತ ಯೋಜನೆಗಳನ್ನು ಸಂಘಟಿಸಿ ಜಿಲ್ಲಾ ಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದ್ದು, ಸಮ್ಮೇಳನಕ್ಕೆ ಫಲಾನುಭವಿಗಳನ್ನು ಕರೆತರುವ ವ್ಯವಸ್ಥೆ ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಫಲಾನುಭವಿಗಳ ಸಮ್ಮೇಳನ ಕುರಿತು ಶುಕ್ರವಾರ ಪೂರ್ವಭಾವಿ ಸಭೆ ನಡೆಸಿ, ಸಮ್ಮೇಳನದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಪ್ರಾಯೋಜಿತ ಫಲಾನುಭವಿಗಳಿಗೆ ವಿವಿಧ ಯೋಜನೆಯಡಿ ಸೌಲಭ್ಯ ನೀಡಲಾಗುತ್ತಿದೆ ಎಂದರು.

ಕಾರ್ಮಿಕ ಇಲಾಖೆಯಿಂದ ಇ-ಶ್ರಮ ಕಾರ್ಡ್, ಅಂಬೇಡ್ಕರ್ ಸಹಾಯಹಸ್ತ ಸೇರಿದಂತೆ ಅನೇಕ ಯೋಜನೆಗಳಡಿ ಸಹಾಯಧನ ಮತ್ತು ಪ್ರೋತ್ಸಾಹಧನ ಪಡೆಯಲು ಸಾರ್ವಜನಿಕರಿಗೆ ಮಾಹಿತಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳು ಸೇರುವಂತೆ ಮಾಡಬೇಕು.

ಆರೋಗ್ಯ ಇಲಾಖೆಯಿಂದ ಅಭಾ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರಗತಿ ಸಾಧಿಸಬೇಕು. ಗ್ರಾಮ ಒನ್, ಕರ್ನಾಟಕ ಒನ್ ಸೇರಿದಂತೆ ಇನ್ನಿತರ ಸೇವಾ ಕೇಂದ್ರಗಳಿಗೆ ಜನರೇ ತೆರಳಿ ಅಭಾ ಕಾರ್ಡ್ ಮಾಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಚಂದ್ರಶೇಖರ ನಾಯಕ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net