ಪಿಕ್‌ಅಪ್ ವಾಹನ: ಬೈಕ್ ಡಿಕ್ಕಿ ಬೈಕ್ ಸವಾರ ಸಾವು

Screenshot_2024_0912_183143
Published on

ರಾಯಚೂರು: ಬೈಕ್‌ಗೆ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹೈದ್ರಾಬಾದ್ ರಸ್ತೆಯಲ್ಲಿ ಗುರುವಾರ ಬೆಳಗಿನ ಜಾವ 5 ಗಂಟೆಗೆ ಸಂಭವಿಸಿದೆ.

ಕಲ್ಮಲಾ ಗ್ರಾಮದ ಎಂ.ಡಿ ಖಾಸಿಂ(31) ಮೃತ. ನಗರದ ಹೈದ್ರಾಬಾದ್ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಿ ಕಲ್ಮಲಾ ಗ್ರಾಮಕ್ಕೆ ಹೋಗುವಾಗ ಈ ಘಟನೆ ನಡೆದಿದೆ.

ಕಲ್ಮಲಾ ಗ್ರಾಮದಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಖಾಸಿಂ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಿ ಒನ್ ವೇ ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಪಿಕ್‌ಅಪ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net