ಬಿಲಾವಲ್ ಭುಟ್ಟೋ ಉದ್ಧಟತನ ಸಲ್ಲ - ಪಾಕಿಸ್ತಾನ ವಿದೇಶಾಂಗ ಸಚಿವನ ವಿರುದ್ಧ ಆಕ್ರೋಶ

171222 Raichur BJP Protest Bhutto
ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಆಕ್ಷೇಪಾರ್ಯ ಹೇಳಿಕೆ ಖಂಡಿಸಿ ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
Published on

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಕುರಿತು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಸ್ಥಳೀಯ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಬಿಲಾವಲ್ ಭುಟ್ಟೋ ಪ್ರಧಾನಿ ಮೋದಿ ಹಾಗೂ ವಿದೇಶಾಂಗ ಸಚಿವ ಎಸ್.ಜೈಶಂಕರ ಬಗ್ಗೆ ಅಕ್ಷೇಪಾರ್ಹ ಮಾತುಗಳನ್ನಾಡುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಬಿಲಾವಲ್ ಭುಟ್ಟೋ ಹೇಳಿಕೆ ದೇಶಕ್ಕೆ ಅಪಮಾನ ಮಾಡುವಂತಿದ್ದು, ಇಂತಹ ಹೇಳಿಕೆ ನೀಡಿದರೆ ತಕ್ಕಪಾಠ ಕಲಿಸಬೇಕಾಗುತ್ತದೆ. ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನದ ಸಚಿವ, ಭಾರತದ ಪ್ರಧಾನಿ ಬಗ್ಗೆ ಮಾತನಾಡುವುದು ಹಾಸ್ಯಾಸ್ಪವಾಗಿದೆ ಎಂದರು. ಪ್ರಮುಖರಾದ ಬಾಬುರಾವ್, ಶಂಕರರೆಡ್ಡಿ, ಎ.ಚಂದ್ರಶೇಖರ, ಯು.ನರಸರೆಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net