ಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ

19022022 Raichur Shivaji Murthy Foundation
Published on

ರಾಯಚೂರು: ಮರಾಠ ಸಮುದಾಯದ ಮುಖಂಡರ ಬೇಡಿಕೆಯಂತೆ ಶೀಘ್ರ 25 ಲಕ್ಷ ರೂ. ವೆಚ್ಚದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದು ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.

ಸ್ಥಳೀಯ ಛತ್ರಪತಿ ಶಿವಾಜಿ ವೃತ್ತದಲ್ಲಿ ಕ್ಷತ್ರಿಯ ಮರಾಠ ಸಮುದಾಯದಿಂದ ಶನಿವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಂದಿನ ಜಯಂತಿಯನ್ನು ಮೂರ್ತಿ ಪ್ರತಿಷ್ಠಾಪಿಸಿ ಆಚರಿಸೋಣ ಎಂದರು. ಸಮುದಾಯದ ಬಡವರಿಗೆ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಸಮುದಾಯದ ಮುಖಂಡರು ಮನೆಯಿಲ್ಲದ ಕಡುಬಡವರನ್ನು ಗುರುತಿಸಿ ಪಟ್ಟಿ ನೀಡಿದಲ್ಲಿ ಮನೆ ಮಂಜೂರು ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಆರ್‌ಡಿಎ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಮಾಜಿ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಪ್ರಮುಖರಾದ ರವೀಂದ್ರ ಜಲ್ದಾರ್, ಆಂಜಿನೇಯ ಕಡಗೋಲ, ಹರೀಶ ನಾಡಗೌಡ, ರಾಜೇಂದ್ರ ಶಿವಾಳೆ, ಅಂಬಾಜಿ, ಮುಕ್ತಿಯಾರ್, ನರಸಪ್ಪ ಯಕ್ಲಾಸಪುರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net