

ರಾಯಚೂರು: ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದು ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಎ ಸಾತ್ವಿಕ್ ಹೇಳಿದರು.
ನಗರದ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಾಲಕರ, ಬಾಲಕಿಯರ ಬಾಲಮಂದಿರ ಮತ್ತು ವೀಕ್ಷಣಾಲಯದ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳಿಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.
ಇದನ್ನೂ ಓದಿ: ವರುಣಾರ್ಭಟಕ್ಕೆ ನಲುಗಿದ ಮಂದಿ: ಮನೆಗೆ ನುಗ್ಗಿದ ನೀರು
ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ರಕ್ಷಣೆ ಪಡೆಯಲು ಕಾನೂನು ಮಾಹಿತಿ ಅಗತ್ಯ ಆದ್ದರಿಂದ ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಹಾಗೂ ಕಾನೂನುಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಗಳಾ ಹೆಗಡೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ, ಬಾಲಕರ ಬಾಲಮಂದಿರ ಅಧೀಕ್ಷಕ ನಾಗರಾಜ್, ಬಾಲಕಿಯರ ಬಾಲಮಂದಿರ ಅಧೀಕ್ಷಕಿ ರಾಧಾಬಾಯಿ, ವೀಕ್ಷಣಾಲಯ ಅಧೀಕ್ಷಕ ಶೇಖ್ ಮಹೆಬೂಬ್, ಜಿಲ್ಲಾ ಪರಿವೀಕ್ಷಣಾಧಿಕಾರಿ ವಿನಯ್ ಕುಮಾರ್ ಪ್ರಮುಖರಾದ ಕಿರಿಲಿಂಗಪ್ಪ, ನಿಸಾರ್ ಅಹ್ಮದ್, ಶಿವರಾಜ್, ತಿಕ್ಕಯ್ಯ ಸೇರಿದಂತೆ ಇತರರಿದ್ದರು.