ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ನಾಳೆ

25092022 raichur mahantesh bidarad
Published on

ರಾಯಚೂರು: ನಗರದ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಮತ್ತು ಉತ್ತಮ ನೌಕರರ, ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬಿರಾದರ ತಿಳಿಸಿದರು.

ಸ್ಥಳೀಯ ಪತ್ರಿಕಾಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿಗೆ ಅಭಿನಂದನಾ ಸಮಾರಂಭ ಮತ್ತು ಸಂಘದ ಸಾಮಾನ್ಯ ಸಭೆಯನ್ನು ನಡೆಸಲಾಗುವುದು. ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರಗೇಶಗೆ ವಿಶೇಷ ಗೌರವ ಪುರಸ್ಕಾರ ನೀಡಲಾಗುತ್ತಿದೆ ಎಂದರು.

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುನಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ತೇರ್ಗಡೆ ಹೊಂದಿರುವ ನೌಕರರ ಮಕ್ಕಳಿಗೆ ಪುರಸ್ಕಾರ ನೀಡಲಾಗುವುದು. ವಿವಿಧ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಜಿಲ್ಲೆಯ 50ಕ್ಕೂ ಹೆಚ್ಚು ಜನರಿಗೆ ಉತ್ತಮ ನೌಕರ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಹಾಂತೇಶ ಬಿರಾದರ ತಿಳಿಸಿದರು. ಜಿಲ್ಲಾಧ್ಯಕ್ಷ ಭೀಮಪ್ಪ ನಾಯಕ, ಪದಾಧಿಕಾರಿಗಳಾದ ಹನುಮಂತ್ರಾಯ ಶಾಖೆ, ಚಂದ್ರಶೇಖರ ಹಿರೇಮಠ, ಶ್ರೀಶೈಲಗೌಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net