ಸ್ವಚ್ಛ, ಸುಂದರ ನಗರ ನಿರ್ಮಾಣಕ್ಕೆ ಸಹಕರಿಸಿ

30012022 Raichur Vasavi club
Published on

ರಾಯಚೂರು: ನಗರದ ನಿವಾಸಿಗಳು ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಪೌರ ಕಾರ್ಮಿಕರಿಗೆ ನೀಡುವ ಮೂಲಕ ನಗರವನ್ನು ಸ್ವಚ್ಛ ಹಾಗೂ ಸುಂದರವನ್ನಾಗಿ ಮಾಡಲು ಸಹಕರಿಸಬೇಕು ಎಂದು ಶಾಸಕ ಡಾ.ಶಿವರಾಜ ಪಾಟೀಲ್ ಮನವಿ ಮಾಡಿದರು.

ಸ್ಥಳೀಯ ವಾಸವಿ ವೃತ್ತದಲ್ಲಿ ವಾಸವಿ ಕ್ಲಬ್‌ನಿಂದ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ್ ಅಭಿಯಾನದ ಮೂಲಕ ಸ್ವಚ್ಛತೆಗೆ ಒತ್ತು ನೀಡಿದ್ದು, ಕ್ಲಬ್‌ನ ಯುವಕರು ಸ್ವಚ್ಛತಾ ಅಭಿಯಾನ ಹಮ್ಮಿಕೊಂಡಿರುವುದು ಮಾದರಿ ಕಾರ್ಯ ಎಂದರು.

ಪೌರ ಕಾರ್ಮಿಕರು ಬಂದಾಗ ಹಸಿ ಮತ್ತು ಒಣ ಕಸ ಬೇರ್ಪಡಿಸಿ ನೀಡಬೇಕು. ಸ್ವಚ್ಛತೆಗೆ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಕೈಜೋಡಿಸಿದಾಗ ಮಾತ್ರ ಅಭಿಯಾನಕ್ಕೆ ಯಶಸ್ಸು ಸಿಗಲು ಸಾಧ್ಯ. ಎಲ್ಲರೂ ಸಹಕರಿಸಿದಾಗ ಮಾತ್ರ ನಗರವನ್ನು ಕಸ ಮುಕ್ತ ಮಾಡಬಹುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net