ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆ

09082022 Eshwar Khandre
Published on

ರಾಯಚೂರು: ಮುಂಬರುವ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ತಾಲೂಕಿನ ಗಿಲ್ಲೆಸುಗೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ದೇಶಕ್ಕೆ ಸ್ವಾತಂತ್ರೃ, ಸಂವಿಧಾನ ನೀಡಿದ್ದು ಕಾಂಗ್ರೆಸ್. ಎಲ್ಲ ಧರ್ಮಗಳನ್ನು ಒಗ್ಗೂಡಿಸಿ ಐಕ್ಯತೆಗಾಗಿ ಕಾಂಗ್ರೆಸ್ ನಾಯಕರು ತ್ಯಾಗ, ಬಲಿದಾನ ಮಾಡಿದ್ದಾರೆ ಎಂದರು. ಸ್ವಾತಂತ್ರೃದ ಅಮೃತ ಮಹೋತ್ಸವ ನಿಮಿತ್ತ ಪಕ್ಷದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಭಿವೃದ್ಧಿಯಲ್ಲಿ ತಾರತಮ್ಯ ಮಾಡುತ್ತಿದ್ದು, ಬೆಲೆ ಏರಿಕೆ, ಇಡಿ ದುರ್ಬಳಕೆ ವಿಷಯಗಳ ಕುರಿತು ಸಂಸತ್‌ನಲ್ಲಿ ಚರ್ಚಿಸಲು ಬಿಡುತ್ತಿಲ್ಲ ಎಂದು ದೂರಿದರು.

ಕಾರ್ಪೋರೇಟ್ ವಲಯಗಳ 9.91 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರ ಬಡವರಿಗೆ ಬೆಲೆ ಏರಿಕೆ ಹೊರೆ ಹೊರಿಸಿದೆ. ಸಿದ್ದರಾಮೋತ್ಸವ ನಡೆಸಿರುವುದು ಸಿದ್ದರಾಮಯ್ಯರ ಅಭಿಮಾನಿಗಳು. ಅವರೆಲ್ಲರೂ ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದಾರೆ ಎಂದು ಹೇಳಿದರು. ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net