ಕಾಲೇಜ್‌ಗಳಲ್ಲಿ ಹಿಜಾಬ್ ನಿಷೇಧ ಹಿಂಪಡೆಯಲಿ

08022022 Raichur protest
Published on

ರಾಯಚೂರು: ರಾಜ್ಯ ಸರ್ಕಾರ ಕಾಲೇಜ್‌ಗಳಲ್ಲಿ ಹಿಜಾಬ್ ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಹಿಂಪಡೆಯುವ ಮೂಲಕ ಸಂವಿಧಾನದ ಧಾರ್ಮಿಕ ಮತ್ತು ಶಿಕ್ಷಣ ಹಕ್ಕನ್ನು ಎತ್ತಿ ಹಿಡಿಯಬೇಕು ಎಂದು ಬಹುಜನ ಸಮಾಜ ಪಕ್ಷ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಪಕ್ಷದ ಪ್ರಮುಖರು ಸೋಮವಾರ ಮನವಿ ಸಲ್ಲಿಸಿದರು. ದೇಶದಲ್ಲಿ ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರಿಗೂ ಸಮಾನ ಹಕ್ಕು ನೀಡಲಾಗಿದ್ದು, ಹಿಜಾಬ್ ನಿಷೇಧಿಸಿದರೆ ಮುಸ್ಲಿಂ ವಿದ್ಯಾರ್ಥಿನಿಯರ ಹಕ್ಕು ಉಲ್ಲಂಘನೆಯಾಗುತ್ತದೆ. ಹಿಜಾಬ್ ಯುವತಿಯರಿಗೆ ರಕ್ಷಣೆ ಒದಗಿಸುತ್ತಿದೆ. ಯುವತಿಯರು ಶಿಕ್ಷಣ ಪಡೆಯಬೇಕು ಎನ್ನುವ ಸರ್ಕಾರ ಮತ್ತೊಂದೆಡೆ ಅವರು ಶಿಕ್ಷಣ ಪಡೆಯದಂತೆ ಹುನ್ನಾರ ನಡೆಸುತ್ತಿದೆ. ಹಿಜಾಬ್ ವಿವಾದ ಹುಟ್ಟು ಹಾಕಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net