ಇತರೆ ಸಮುದಾಯದವರನ್ನು ಸದಸ್ಯರನ್ನಾಗಿಸುವಂತೆ ಒತ್ತಾಯಿಸಿ ಧರಣಿ

IMG_20241125_115242
filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 128;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45;
Published on

ರಾಯಚೂರು: ಪರಿಶಿಷ್ಟ ಜಾತಿಗಳಲ್ಲಿ ಮೀಸಲಾತಿ ವರ್ಗೀಕರಣ ಜಾರಿಗಾಗಿ ದತ್ತಾಂಶ ಪರಿಶೀಲನೆ ಮಾಡಲು ಆಯೋಗವೊಂದನ್ನು ರಾಜ್ಯ ಸರ್ಕಾರ ರಚಿಸಿದೆ. ಈ ಆಯೋಗಕ್ಕೆ ಪ.ಜಾಯ ವಿವಿಧ ಸಮುದಾಯಗಳ ತಲಾ ಒಬ್ಬ ಪ್ರತಿನಿಧಿಯನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಒತ್ತಾಯಿಸಿ ಮಾದಿಗ ಸಮಾಜದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಧರಣಿ ನಡೆಸಲಾಯಿತು.

ಮೀಸಲಾತಿ ವರ್ಗೀಕರಣ ಜಾರಿ ಮಾಡಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಎಚ್.ಎನ್.ನಾಗಮೋಹನ್‌ದಾಸ್ ಅವರ ಆಯೋಗವನ್ನು ರಚಿಸಲಾಗಿದೆ. ಇದರಿಂದ ಪಾರದರ್ಶಕ ದತ್ತಾಂಶ ಪರಿಶೀಲನೆ ಸಾಧ್ಯವಾಗುವುದಿಲ್ಲ ಆದ್ದರಿಂದ ಕೂಡಲೇ ಮಾದಿಗ, ಛಲವಾದಿ, ಲಂಬಾಣಿ, ಭೋವಿ, ಕೊರಚ, ಕೊರಮ ಸೇರಿದಂತೆ ಇತರೆ ಪರಿಶಿಷ್ಟ ಜಾತಿಗಳ ಸಮುದಾಯಗಳಿಗೆ ತಲಾ ಒಬ್ಬರಂತೆ ಸದಸ್ಯರನ್ನು ನೇಮಕ ಮಾಡಬೇಕೆಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಮಹೇಂದ್ರಕುಮಾರ ಮಿತ್ರ, ನರಸಿಂಹಲು ಪೋತಗಲ್, ಜಗ್ಲಿ ಉರುಕುಂದಪ್ಪ, ನರಸಿಂಹಲು ಮರ್ಚಟಾಳ, ಸುಶೀಲ್‌ಕುಮಾರ, ತಾಯಪ್ಪ ಗಧಾರ್, ಪ್ರಭುರಾಜ್, ಪಾಂಡು, ಆಕಾಶ, ಎಂ.ಶರಣಬಸವ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net