ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಉಚಿತ ಕಾರ್ಯಾಗಾರ ಅ.20ಕ್ಕೆ: ಬಾಬುರಾವ್ ಶೇಗುಣಸಿ

oplus_2
oplus_2
Published on

ರಾಯಚೂರು: ಕಲ್ಯಾಣ ಕರ್ನಾಟಕ ಕರಿಯರ್ ಅಕಾಡೆಮಿ ಹಾಗೂ ಜಿ.ಕುಮಾರ ನಾಯಕ ಅಭಿವೃದ್ಧಿಪರ ಅಭಿಮಾನಿಗಳ ಬಳಗದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಉಚಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಕೆಇಎಸ್ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಚಾರ್ಯ ಬಾಬುರಾವ್ ಶೇಗುಣಸಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಅ.20ರಂದು ಪಂಡಿತ್ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಧಾರವಾಡದ ಐಎಎಸ್ ವಿಜಾರ್ಡ್ ಸಂಸ್ಥೆಯ ನಿರ್ದೇಶಕ ಪಾಶ್ವನಾಥ್ ತರಬೇತಿ ನೀಡಲಿದ್ದಾರೆ. ತರಬೇತಿಯ ನಿರ್ವಹಣೆಯನ್ನು ಕಲ್ಯಾಣ ಕರ್ನಾಟಕ ಕರಿಯರ್ ಅಕಾಡೆಮಿಯ ನಿರ್ದೇಶಕ ಹನುಮಂತ ನಾಯಕ ಅವರು ವಹಿಸಿಕೊಳ್ಳಲಿದ್ದಾರೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ 53,000 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಲಾಗಿದ್ದು, ವಿಶೇಷವಾಗಿ ಕನ್ನಡ ಮಾಧ್ಯಮದಲ್ಲಿ ಈ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅವಕಾಶ ದೊರೆಯುತ್ತದೆ. ವಿದ್ಯಾರ್ಥಿಗಳು ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಎಸ್‌ಕೆಇಎಸ್ ಪ್ಯಾರಾಮೆಡಿಕಲ್ ಕಾಲೇಜಿನ ಸಂಚಾಲಕ ಶರಣಪ್ಪ ನಂದಿಹಾಳ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net