ಸ್ಪರ್ಧಾತ್ಮಕ ಪರೀಕ್ಷೆಗಾಗಿ ನಿರಂತರ ಅಭ್ಯಾಸಕ್ಕೆ ಅಣಿಯಾಗಿ ; ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಸಲಹೆ

16022020 Raichur coching Class
Published on

ರಾಯಚೂರು : ಉನ್ನತ ಹುದ್ದೆ ಅಲಂಕರಿಸಲು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲೆ ಮುಂದೇನಾಗಬೇಕು ಎನ್ನುವ ಗುರಿ ಹಾಕಿಕೊಳ್ಳುವ ಜತೆಗೆ ಕೋಚಿಂಗ್ ಅನಿವಾರ್ಯ ಎನ್ನುವ ಭ್ರಮೆಯಿಂದ ಹೊರ ಬಂದು ನಿರಂತರ ಅಭ್ಯಾಸಕ್ಕೆ ಅಣಿಯಾಗಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಸಲಹೆ ನೀಡಿದರು.

ನಗರದ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಜಿಲ್ಲಾಡಳಿತ, ಜಿಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಿಯೋಲ್ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ ಬದುಕಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ಶಿಕ್ಷಣ ಮಹತ್ವವಾದವು. ಈ ಮೂರು ಘಟ್ಟಗಳಲ್ಲಿ ಉತ್ತಮ ಫಲಿತಾಂಶ ಹೊಂದುವುದು ಮುಖ್ಯ. ಈ ಹಂತದಲ್ಲಿ ಐಎಎಸ್, ಕೆಎಎಸ್, ಐಪಿಎಸ್ ಸೇರಿ ಇನ್ನಿತರ ಹುದ್ದೆ ಅಲಂಕರಿಸುವ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲೇಬೇಕು ಎಂದು ಪ್ರತಿಪಾದಿಸಿದರು.

ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಮಾತನಾಡಿದರು. ಕಾರ್ಯಾಗಾರದಲ್ಲಿ ಜಿಪಂ ಸಿಇಒ ಜಿ.ಲಕ್ಷ್ಮಿಕಾಂತರೆಡ್ಡಿ, ಐಎಎಸ್ ಪ್ರೊಬೇಷನರಿ ಅಧಿಕಾರಿ ಯುಕೇಶ್ ಕುಮಾರ, ಸಮಾಜ ಕಲ್ಯಾಣ ಇಲಾಖೆ ಡಿಡಿ ಆರ್.ಸುಬ್ರಮಣ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ಜಿಲ್ಲಾ ಪ.ವರ್ಗಗಳ ಕಲ್ಯಾಣಾಧಿಕಾರಿ ಚಿದಾನಂದ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ರಾಜು ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net