ಹಿಂದುಳಿದ ವರ್ಗಗಳ‌ ನಿಗಮಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಬಿಜೆಪಿಯಿಂದ ಪ್ರತಿಭಟನೆ

BJP PROTEST IN FRONT OF AMBEDKAR CIRCLE AND SUBMIT MEREM ONDRUM TO DC OFFICE (3)
Published on

ರಾಯಚೂರು: ಹಿಂದುಳಿದ ವರ್ಗಗಳ ವಿವಿಧ ನಿಗಮಗಳಿಗೆ ಅನುದಾನ ಒದಗಿಸುವಂತೆ ಆಗ್ರಹಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಇದೇ ವೇಳೆ ಮಾಜಿ ಎಂಎಲ್ಸಿ ಎ.ಶಂಕ್ರಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿರುವ ಎಲ್ಲ ನಿಗಮಗಳಿಗೆ ಅನುದಾನವನ್ನು ಕಡಿತಗೊಳಿಸುವ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕಲ್ಲು ಹಾಕಿದೆ. ಅಹಿಂದ ನಾಯಕರೆಂಬ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿಗರು ಇದೀಗ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಎಲ್ಲ ಅನುದಾನದ ಹಣವನ್ನು ಗ್ಯಾರಂಟಿಗಳಿಗೆ ಮೀಸಲಿಡುವ ಮೂಲಕ ರಾಜ್ಯವನ್ನು ದಿವಾಳಿಗೊಳಿಸಿದ್ದಾರೆ. ರಾಜ್ಯದ ಖಜಾನೆಯನ್ನು ಲೂಟಿ ಮಾಡಿ, ಹಿಂದುಳಿದ ಸಮುದಾಯವನ್ನು ಕಡೆಗಣಿಸಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಕಡಗೋಲ ರಾಮಚಂದ್ರ, ವಿಜಯಭಾಸ್ಕರ ಇಟಗಿ, ನರಸಪ್ಪ ಯಕ್ಲಾಸಪೂರ, ನರಸರೆಡ್ಡಿ, ನಾಗರಾಜ ಬಾಲ್ಕಿ, ಈ ಶಶಿರಾಜ, ಪಲಗುಲ ನಾಗರಾಜ, ಆಂಜನೇಯ್ಯ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net