ರಾಯಚೂರಿನಲ್ಲಿ 20ರಿಂದ 22ರವರೆಗೆ ಕಠಿಣ ಲಾಕ್ ಮುಂದುವರಿಕೆ

Corona
Published on

ರಾಯಚೂರು: ವ್ಯಾಪಕವಾಗಿ ಹರಡುತ್ತಿರುವ ಕರೊನಾ ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಜಿಲ್ಲಾಡಳಿತ ಮೂರು ದಿನಗಳ ಸಂಪೂರ್ಣ ಲಾಕ್‌ಡೌನ್ ನಿಯಮವನ್ನು ಪುನಃ ಮೂರು ದಿನಗಳ ಕಾಲ ಜಾರಿಗೊಳಿಸಲು ಮುಂದಾಗಿದೆ. ಮೇ 20 ರಿಂದ 22ರವರೆಗೆ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಘೋಷಣೆ ಮಾಡಿದೆ.

ಜಿಲ್ಲೆಯಲ್ಲಿ ಭಾನುವಾರದಿಂದ ಮಂಗಳವಾರದವರೆಗೆ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಿದ್ದರೂ ಕರೊನಾ ಸೋಂಕಿನಲ್ಲಿ ಹೇಳಿಕೊಳ್ಳುವಂತಹ ಇಳಿಕೆ ಕಂಡು ಬರದ ಕಾರಣ ಪುನಃ ಮೂರು ದಿನಗಳ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.

ಬುಧವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ ಅಗತ್ಯ ವಸ್ತುಗಳಾದ ಕಿರಾಣಿ, ತರಕಾರಿ, ಹಾಲು, ಹಣ್ಣು, ನೀರು, ಮಾಂಸ ಖರೀದಿಗೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 12ರಿಂದ ಮೇ 22ರ ರಾತ್ರಿ 12ರವರೆಗೆ ಸಂಫೂರ್ಣ ವ್ಯಾಪಾರ, ವಹಿವಾಟಿಗೆ ನಿರ್ಬಂಧ ಹೇರಲಾಗಿದೆ. ಲಾಕ್‌ಡೌನ್ ಸಂದರ್ಭ ಆಸ್ಪತ್ರೆ, ಔಷಧ ಅಂಗಡಿ, ಪೆಟ್ರೋಲ್ ಬಂಕ್ ಹಾಗೂ ತುರ್ತು ವೈದ್ಯಕೀಯ ಸೇವೆಗಳನ್ನು ಹೊರತುಪಡಿಸಿ ಇನ್ನಿತರ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net